ಬೆಂಗಳೂರು: ಮುಖ್ಯಮಂತ್ರಿ Siddaramaiah ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿರುವ ಅವರು, ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣವನ್ನು ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.




