ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸಿಎಂ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಬಿಡುಗಡೆಗೊಳಿಸಿ, ಐದು ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನಗೈದು ಮಾತನಾಡಿದ ಅವರು, ಇವತ್ತಿನ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ. ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದರು.
ಇವತ್ತಿನ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು. ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಏನಾಗುತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ. ಈ ಅರಿವು ಎಲ್ಲರಿಗೂ ಇರಬೇಕು ಎಂದರು.
ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ದ, ಬಸವ ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ. ಜಾತಿ ಎನ್ನುವುದು ಸಾಮಾಜಿಕ ವಾಸ್ತವ. ಸಾಮಾಜಿಕ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದರು.
ಡಾ.ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸುತ್ತೇನೆ ಎಂದರು.
ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿಗೆ ಭಾಜನರಾಗಿರುವ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಡಾ.ಷರೀಫಾ, ಡಾ.ನಳಿನಾಕ್ಷಿ ಸಣ್ಣಪ್ಪ, ನಾಗವೇಣಿ, ಸಂಗಮ್ ದೇವ್, ಶಿವಲಿಂಗಪ್ಪ ಈ ಐವರು ಗಣ್ಯರು ಪ್ರಶಸ್ತಿಗೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ ಎಂದರು.
ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ ಬಿ.ಕೆ.ರವಿ ಅವರ ಪತ್ರಿಕಾ ವೃತ್ತಿಯು 50 ವಸಂತ ಪೂರೈಸಿದ ಈ ಹೊತ್ತಿನಲ್ಲಿ ಅವರನ್ನು ಅತ್ಯಂತ ಸಂತೋಷದಿಂದ ಸನ್ಮಾನಿಸಿದ್ದೇನೆ ಎಂದರು.











