ಬೆಂಗಳೂರು: ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17 ನೇ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.
ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.
ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22 ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87% ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, , ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದರು.
ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ, ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.
ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು ಎಂದ ಮುಖ್ಯಮಂತ್ರಿಗಳು ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು, ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.




