ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಗೃಹ ಸಚಿವ ಪರಮೇಶ್ವರ್ ಅವರ ಆಪ್ತ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆದಾಯ ತೆರಿಗೆ ಪಾವತಿಸದ ಆರೋಪದಡಿ ಈ ದಾಳಿ ನಡೆಸಲಾಗಿದೆ.
ಮೂರು ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ನೀಡದ ಅಧಿಕಾರಿಗಳು, ಅಲ್ಲಿಗೇ ಉಪಾಹಾರ ತರಿಸಿಕೊಂಡು ಕೆಲಸ ಮುಂದುವರಿಸಿದರು.
ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳ ಕಾರ್ಯಾಚರಣೆಗೆ ಸಹಕರಿಸಿದ್ದಾರೆ ಎನ್ನಲಾಗಿದೆ.




