ಬೆಂಗಳೂರು: ಫೇಸ್ ಬುಕ್, ಎಕ್ಸ್ ಮೊದಲಾದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥನಾಗಿರುವ ಮೆಟಾ ಸಂಸ್ಥೆ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಸಮರ ಘೋಷಿಸಿದ್ದಾರೆ. ಮೆಟಾ ಸಂಸ್ಥೆ ರಾಜಕೀಯ ಪಕ್ಷಪಾತದ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಲ್ಲದೆ, ಈ ನಡೆ ಖಂಡಿಸಿ ಬೆಂಗಳೂರಿನ ವಿವಿಧೆಡೆ ‘ಮೆಟಾ ಬಿಜೆಪಿ ಕಾ ಬೇಟಾ’ ಎಂಬ ಘೋಷಣೆಯೊಂದಿಗೆ ಬೃಹತ್ ಬ್ಯಾನರ್ಗಳನ್ನು ಅಳವಡಿಸಿದ್ದಾರೆ.
- ‘ಬಾಬಾ ಸಾಹೇಬ್ ಅಂಬೇಡ್ಕರ್ ಕೊನೆಯ ದಿನಗಳು’ ಶೀರ್ಷಿಕೆ ಅನಾವರಣ
- ಪ್ರಕಾಶಕರು, ಮಾರಾಟಗಾರರಿಗೆ ಆಹ್ವಾನ
- ಬ್ಲಾಕ್ಮೇಲ್ ತಂತ್ರಗಳಿಗೆ ಹೆದರುವುದಿಲ್ಲ, ಪ್ರತಿಷ್ಠೆ ಬಿಡಿ
- ದರ್ಶನ್ ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಗೆ ಕೋರ್ಟ್ ಅಸ್ತು
- ಸಂವಿಧಾನ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಹೋರಾಟ ಅಗತ್ಯ: ಸಿದ್ದರಾಮಯ್ಯ
ಸಾದಹಳ್ಳಿ ಗೇಟ್, ನ್ಯೂ ಏರ್ಪೋರ್ಟ್ ರಸ್ತೆಯ ಟೋಲ್ ಪ್ಲಾಜಾ ಸಮೀಪ ಹಾಗೂ ಚಿಕ್ಕಜಾಲ ಸೇರಿದಂತೆ ನಗರದ ವಿವಿಧೆಡೆ ಈ ಬ್ಯಾನರ್ಗಳನ್ನು ಅಳವಡಿಸಲಾಗಿದ್ದು ನೋಡುಗರ ಗಮನ ಸೆಳೆಯುತ್ತಿವೆ. ಮೆಟಾ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಭಾಷಣಗಳಿಗೆ ಕಡಿವಾಣ ಹಾಕುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಸುಳ್ಳು ಸುದ್ದಿಗಳ ಪ್ರಸಾರಕ್ಕೆ ಅವಕಾಶ ನೀಡುತ್ತಿದೆ ಮತ್ತು ರಾಜಕೀಯ ಪ್ರಭಾವಕ್ಕೆ ಮಣಿಯುವ ಧೋರಣೆ ಅನುಸರಿಸುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕರು ಆಪಾದಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು. ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮೆಟಾ ಸಂಸ್ಥೆ ಒಂದು ಪಕ್ಷ ಮತ್ತು ಒಂದು ತತ್ವದ ಪರವಾಗಿ ಕೆಲಸ ಮಾಡುತ್ತಿದೆ ಕಾಂಗ್ರೆಸ್ ನಾಯಕರ ಹೇಳಿಕೆಗಳು ಮತ್ತು ವಿಚಾರಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ತನ್ನ ಫ್ಲಾಟ್ ಫಾರಂ ಗಳಿಂದ ತೆಗೆದು ಹಾಕುತ್ತಿದೆ ಎಂದು ದೂರಿದ್ದಾರೆ.




