ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಒಲ್ಲದ ಮನಸ್ಸಿನಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿ ನೀಡಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಇಲ್ಲವೇ ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದರು. ಈ ಕುರಿತು ಬಿಜೆಪಿ ಕೇಂದ್ರ ನಾಯಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಧಾರವಾಡದಿಂದ ಮಾಜಿ ಸಚಿವ ಪ್ರಹ್ಲಾದ ಜೋಶಿ ಹಾಗೂ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿತು.
ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸೂಚಿಸಿತು. ಆದರೆ ಬೆಳಗಾವಿ ಕ್ಷೇತ್ರದಲ್ಲಿ ತಮ್ಮ ಬೀಗರ ಪತ್ನಿ ಮಂಗಳ ಅಂಗಡಿ ಅವರು ಸಂಸದರಾಗಿದ್ದು, ಅವರಿಗೆ ಟಿಕೆಟ್ ತಪ್ಪಿಸಿದೆ ಎಂಬ ಆರೋಪ ಕೇಳಿ ಬರಲಿದೆ. ಈ ಆರೋಪದ ಹಣೆಪಟ್ಟಿ ಅಂಟಿಸಿಕೊಳ್ಳಲು ನನಗೆ ಇಷ್ಟವಿಲ್ಲ. ಹೀಗಾಗಿ ನಾನು ಈ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದರು.
ಆದರೆ ಹೈಕಮಾಂಡ್ ವಿವಿಧ ಸಮೀಕ್ಷಾ ವರದಿಗಳನ್ನು ಆಧರಿಸಿ ಈ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿದೆ. ಈ ಕುರಿತು ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿ ಒಪ್ಪಿಸುವಂತೆ ಹೈಕಮಾಂಡ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚಿಸಿತು.ಈ ಹಿನ್ನೆಲೆಯಲ್ಲಿ ಕಾರ್ಯೋನ್ಮುಖರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಮಾತುಕತೆ ನಡೆಸಿದರು. ನಂತರ ಬಿಗಿಪಟ್ಟು ಸಡಿಲಿಸಿದ ಜಗದೀಶ್ ಶೆಟ್ಟರ್ ಇದೀಗ ಬೆಳಗಾವಿಯಿಂದ ಸ್ಪರ್ಧೆ ಮಾಡಲು ಸಮ್ಮತಿನೀಡಿದ್ದಾರೆ.
ನೆನೆಗುದಿಗೆ ಬಿದ್ದಿರುವ ರಾಯಚೂರು ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ ಬಿ.ವಿ.ನಾಯಕ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವ ಬಿಜೆಪಿ ನಾಯಕರು, ಚಿತ್ರದುರ್ಗದಿಂದ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.




