ಬೆಂಗಳೂರು: ನಿಷೇಧಿತ ಉಗ್ರ ಸಂಘಟನೆ ಬಾಂಗ್ಲಾ ಮೂಲದ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ-ಇಂಡಿಯಾ) ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಸರಣಿ ಪ್ರಕರಣಗಳಲ್ಲಿ ಬಾಂಗ್ಲಾ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬಾಂಗ್ಲಾದಲ್ಲಿ 2005ರಲ್ಲಿ ನಡೆದ ಸರಣಿ ಸ್ಪೋಟ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಕೌಸರ್, 2014ರಲ್ಲಿ ಸಂಘಟನೆ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜತೆ ಸೇರಿ ಭಾರತ ಪ್ರವೇಶಿಸಿದ್ದರು. ಬಳಿಕ ಅದೇ ವರ್ಷ ಅಕ್ಟೋಬರ್ನಲ್ಲಿ ಕೊಲ್ಕೊತ್ತಾದ ಬುದ್ರ್ವಾನ್ ಸ್ಫೋಟ ನಡೆಸಿದ್ದರು. ಬಳಿಕ ತಮ್ಮ ತಂಡಗಳನ್ನು ದಕ್ಷಿಣ ರಾಜ್ಯಗಳ ಕಡೆ ಬೇರ್ಪಡಿಸಿದ್ದ ಕೌಸರ್ ತನ್ನ ಕೆಲ ಸಹಚರರ ಜತೆ ಸೇರಿ ತುಮಕೂರು, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಇತರ ಸಣ್ಣ-ಪುಟ್ಟ ವ್ಯಾಪಾರಸ್ಥನ ಸೋಗಿನಲ್ಲಿ ಓಡಾಡಿಕೊಂಡಿದ್ದ.
ಎನ್ಐಎ ಕೋಲ್ಕತ್ತಾ ಶಾಖೆಯು ಬುದ್ರ್ವಾನ್ ಸ್ಫೋಟ ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದ ಸಂದರ್ಭದಲ್ಲಿ ದೊರೆತ ಮಾಹಿತಿ ಆಧಾರದ ಮೇಲೆ ಜೂನ್ 2019ರಲ್ಲಿ ಬೆಂಗಳೂರು ನಗರ ಪೊಲೀಸರು ಆರಂಭಿಕವಾಗಿ ಪ್ರಕರಣ ದಾಖಲಿಸಿದ್ದರು. ಬಳಿಕ ಎನ್ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಬಾಂಗ್ಲಾದಲ್ಲಿ 2005ರಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು 2014ರಲ್ಲಿ ಸಂಘಟನೆ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜೊತೆಗೆ ಪರಾರಿಯಾಗಿದ್ದ ಜಹೀದುಲ್ ಇಸ್ಲಾಂ ಭಾರತ ಪ್ರವೇಶಿಸಿದ್ದ ಎಂದು ಎನ್ ಐಎ ತನಿಖೆಯಲ್ಲಿ ತಿಳಿದುಬಂದಿತ್ತು.
ಬುದ್ರ್ವಾನ್ ಸ್ಫೋಟ ಪ್ರಕರಣದ ತನಿಖೆಯ ಸಮಯದಲ್ಲಿ ಏಜೆನ್ಸಿಯ ಕೋಲ್ಕತ್ತಾ ಶಾಖೆಯ ಕಚೇರಿಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ 2019ರ ಜೂನ್ನಲ್ಲಿ ಬೆಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಎನ್ಐಎ ಪ್ರಕರಣ ದಾಖಲಿಸಿಕೊಂಡಿತ್ತು.
ಎನ್ಐಎ ತನಿಖೆಯಲ್ಲಿ ದೊರೆತ ಮಾಹಿತಿ ಪ್ರಕಾರ, 2005ರಲ್ಲಿ ಬಾಂಗ್ಲಾದಲ್ಲಿ ನಡೆದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಪೊಲೀಸರ ವಶದಲ್ಲಿದ್ದ ಜಾಹಿದುಲ್, 2014ರಲ್ಲಿ ಜೆಎಂಬಿ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜೊತೆಗೆ ಪರಾರಿಯಾಗಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ. ಅದೇ ಸಂದರ್ಭದಲ್ಲಿ 2014ರ ಬುದ್ರ್ವಾನ್ ಸ್ಫೋಟ ಪ್ರಕರಣದಲ್ಲಿ ಶಾಮೀಲಾಗಿದ್ದ.
ಬುದ್ರ್ವಾನ್ ಸ್ಫೋಟದ ನಂತರ, ಜಾಹಿದುಲ್ ಮತ್ತು ಸಹಚರರು ಬೆಂಗಳೂರಿಗೆ ಪರಾರಿಯಾಗಿದ್ದರು. ಬೆಂಗಳೂರಿನಲ್ಲಿದ್ದುಕೊಂಡೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಮುಸ್ಲಿಂ ಯುವಕರಿಗೆ ಭಾರತ-ವಿರೋಧಿ ಚಟುವಟಿಕೆಗಳನ್ನು ನಡೆಸುವಂತೆ ಕುಮ್ಮಕ್ಕು ನೀಡಿದ್ದರು. ಸ್ಫೋಟದ ನಂತರ, ಜಹಿದುಲ್ ಮತ್ತು ಅವನ ಸಹಚರರು ಬೆಂಗಳೂರಿಗೆ ಬಂದಿದ್ದರು.
ಇಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಮುಸ್ಲಿಂ ಯುವಕರನ್ನು ಭಾರತ ವಿರೋಧಿ ಚಟುವಟಿಕೆಗಳಿಗೆ ನೇಮಕ ಮಾಡಿದ್ದರು. ಆರೋಪಿಗಳು ಮತ್ತು ಆತನ ಸಹಚರರು 2018ರ ಜನವರಿಯಲ್ಲಿ ಬೋಧಗಯಾದಲ್ಲಿ ಸ್ಫೋಟ ನಡೆಸಿದ್ದರು. ಆರೋಪಿಗಳು ಉಗ್ರ ಚಟುವಟಿಕ ಮುಂದುವರೆಸಲು ಡಕಾಯಿತಿ ಮೂಲಕ ಹಣವನ್ನು ಸಂಗ್ರಹಿಸಲು ಸಂಚು ರೂಪಿಸಿದ್ದರು ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ.




