ಬೆಂಗಳೂರು: ಜೈನ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಜೈನ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಕನ್ನಡ ಮಾತನಾಡುವ ಜೈನರಿದ್ದಾರೆ. ರಾಜ್ಯದಲ್ಲಿ ಒಟ್ಟು ಇಪ್ಪತ್ತು ಲಕ್ಷ ಜೈನ ಸಮುದಾಯದವರಿದ್ದು, ಇವರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಪರಿಶೀಲನೆ ನಡೆಯುತ್ತಿದೆ ಎಂದರು.
ಹಿಂದೆ ಸಮೀಕ್ಷೆ ನಡೆದ ಸಂದರ್ಭದಲ್ಲಿ ರಾಜಸ್ಥಾನದಿಂದ ಬಂದಿರುವ ಜೈನ ಸಮಾಜವನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಲಕ್ಷ ಜೈನರು ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಇಡೀ ರಾಜ್ಯದಲ್ಲಿ ಹಲವೆಡೆ ಜೈನರಿದ್ದಾರೆ. ಇವರೆಲ್ಲಾ ಕನ್ನಡ ಮಾತನಾಡುವ ಜೈನರು. ನಮ್ಮ ಜತೆಯೇ ಬೆರೆತು ಹೋಗಿದ್ದಾರೆ ಎಂದು ಹೇಳಿ, ಜೈನ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ವಿದ್ಯಾರ್ಥಿನಿಲಯ ತೆರೆಯುವ ಬಗ್ಗೆಯೂ ಸರ್ಕಾರ ಪರಿಶೀಲನೆ ನಡೆಸುವುದು ಎಂದರು.
ಈ ಕುರಿತು ಪ್ರಶ್ನೆ ಕೇಳಿದ ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಚಿಹ್ನೆ ನೀಡಿದ್ದು ಜೈನ ಮುನಿ ಮಹಾರಾಜ ವಿದ್ಯಾನಂದ ಅವರು ಎಂಬ ಮಾಹಿತಿಯನ್ನು ಸದನಕ್ಕೆ ತಿಳಿಸಿದರು.
ಜೈನ ಮುನಿ ವಿದ್ಯಾನಂದ ಮಹಾರಾಜ್ ಅವರು ಬೆಳಗಾವಿಯ ಶೇಡ್‌ಬಾಳ್‌ನವರು. ಅವರು ದೆಹಲಿಯಲ್ಲಿದ್ದರು. ಈ ಹಿಂದೆ ದಿ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಜೈನ ಮಹಾಮುನಿ ಮಹರಾಜ ವಿದ್ಯಾನಂದ ಅವರನ್ನು ಭೇಟಿ ಮಾಡಿ ಪಕ್ಷದ ಚಿಹ್ನೆ ಬಗ್ಗೆ ಕೇಳಿದ ಸಂದರ್ಭದಲ್ಲಿ ಜೈನ ಮುನಿಯವರು ಇಂದಿರಾಗಾಂಧಿ ಅವರಿಗೆ ಕಾಂಗ್ರೆಸ್ ಚಿಹ್ನೆಯಾದ ಹಸು ಮತ್ತು ಕರುವನ್ನು ಬಿಟ್ಟು ಹಸ್ತದ ಚಿಹ್ನೆ ಬಳಸುವಂತೆ ಹೇಳಿದರು. ಅದರಂತೆ ಇಂದಿರಾಗಾಂಧಿ ಅವರು ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಚಿಹ್ನೆ ಬಳಸಿದರು. ಆಗ ಕಾಂಗ್ರೆಸ್ ಮತ್ತೆ ದೇಶದಲ್ಲಿ ದೊಡ್ಡದಾಗಿ ಬೆಳೆಯಿತು. ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಚಿಹ್ನೆ ನೀಡಿದ ಜೈನ ಸಮುದಾಯದವರ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು. ಆ ಚಿಹ್ನೆಯಿಂದಲೇ ನಾವು ನೀವೆಲ್ಲಾ ಸಚಿವರು, ಶಾಸಕರಾಗಿದ್ದೇವೆ ಎಂದರು.




