ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಗರ ಮತ್ತು ಶ್ರೀರಾಮಮಂದಿರ ವಾರ್ಡ್ ನಲ್ಲಿ ಸಾರ್ವಜನಿಕರ ಸಮಸ್ಯೆ ಮತ್ತು ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆಯನ್ನು ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ಪಾದಯಾತ್ರೆ ಮಾಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ಮಾತನಾಡಿ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ 7 ವಾರ್ಡ್ ಗಳಲ್ಲಿ ಪ್ರತಿ ವಾರ ಒಂದು ವಾರ್ಡ್ ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡಲಾಗುತ್ತಿದೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರಿಸಲು ಸಮಸ್ಯೆ ಇರುವ ಸ್ಥಳಕ್ಕೆ ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಮಸ್ಯೆಗಳನ್ನು ಖುದ್ದಾಗಿ ನೋಡಿದಾಗ ಶಾಶ್ವತ ಪರಿಹಾರ ಮಾಡಲು ಸಾಧ್ಯ. ಸಮರ್ಪಕವಾಗಿ ಕಸ ವಿಲೇವಾರಿ ಕುರಿತು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪುಟ್ ಪಾತ್ ನಿರ್ಮಾಣ, ಬೀಳುವ ವಯಸ್ಸಾದಂತಹ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಮತ್ತು ಪಾರ್ಕ್ ಗಳನ್ನು ದುರಸ್ತಿ ಮತ್ತು ಮಾದರಿ ಬಾಕ್ಸ್ ಮಾದರಿ ಚರಂಡಿ, ಆಧುನಿಕ ಶೈಲಿಯ ಪುಟ್ ಪಾತ್ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಣೆ ಮಾಡಲಾಗಿದೆ. ಸಾರ್ವಜನಿಕರ ತೆರಿಗೆ ಹಣ ಸಮರ್ಪಕವಾಗಿ ಉಪಯೋಗವಾಗುವಂತೆ ಕಾಮಗಾರಿಗಳ ಯೋಜನೆ ರೂಪಿಸಲಾಗಿದೆ ಎಂದರು.
ಕಾರ್ಯಪಾಲಕ ಇಂಜಿನಿಯರ್ ಗಂಗಾಧರ್, ಪಾಲಿಕೆ ಮಾಜಿ ಸದಸ್ಯ ಹೆಚ್.ವಿಜಯಕುಮಾರ್, ತೋಟಗಾರಿಕೆ ಅಧೀಕ್ಷಕ ಮಹಮದ್ ಅಲಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯೋಗೇಶ್, ಜನಮಂಡಳಿ ಎಇಇ ಹರೀಶ್ ನಾಯ್ಕ್, ಬಿಬಿಎಂಪಿ ಆರೋಗ್ಯ ಇಲಾಖೆ ಮತ್ತು ಸಂಚಾರಿ ಪೊಲೀಸ್, ಬೆಸ್ಕಾಂ ಅಧಿಕಾರಿಗಳು, ಸ್ಥಳೀಯ ಬಿಜೆಪಿ ಮುಖಂಡರಾದ ಬಿ.ಎನ್.ಶ್ರೀನಿವಾಸ್, ಯಶಸ್ ನಾಯಕ್, ಕಿರಣ್, ಗಿರೀಶ್ ಗೌಡ, ಪ್ರವೀಣ್ ಪಾಲ್ಗೊಂಡಿದ್ದರು.