ಬಿಬಿಎಂಪಿ ಅಧಿಕಾರಿ ಮತ್ತು ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಮಹತ್ವ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಸಾಧನೆಗಳನ್ನು ಯುವ ಸಮೂಹಕ್ಕೆ ಅರಿವು ಮೂಡಿಸಲು ಕಾಲ್ನಡಿಗೆ ಜಾಥ ನಡೆಸಲಾಯಿತು.
ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಬಿಎಂಪಿ ಕೇಂದ್ರ ಕಛೇರಿಯಿಂದ ಎಮ್.ಜಿ.ರಸ್ತೆ ಗಾಂಧಿ ಪ್ರತಿಮೆ ವರಗೆ ಕಾಲ್ನಡಿಗೆ ಜಾಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬಿಬಿಎಂಪಿ ಅಧಿಕಾರಿಎಸ್.ಆರ್.ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಹಸಿರು ಧ್ವಜ ತೋರುವ ಮೂಲಕ ಕಾಲ್ನಡಿಗೆ ಜಾಥಗೆ ಚಾಲನೆ ನೀಡಿದರು.
ಬ್ರಿಟಿಷರ ನೂರಾರು ವರ್ಷಗಳ ಕಾಲ ಭಾರತದ ಮೇಲೆ ಪಾರುಪತ್ಯ ನಡೆಸಿದರು, ದೇಶದ ಲಕ್ಷಾಂತರ ಜನರ ತ್ಯಾಗ ಬಲಿದಾನದಿಂದ 1947ರಲ್ಲಿ ಸ್ವಾತಂತ್ರ್ಯ ಲಭಿಸಿತು.
ರಾಷ್ಟ್ರಪಿತ ಮಹಾತ್ಮ ಗಾಂಧೀಜೀ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಜವಾಹರ್ ಲಾಲ್ ನೆಹರೂ, ಲಾಲ ಲಜಾಪತ್ ರಾಯ್, ಬಾಲಗಂಗಾಧರ ತಿಲಕ್, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಮಹನೀಯರುಗಳು ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಟ ಮಾಡಿದ ಪ್ರತಿಫಲ ಸ್ವಾತಂತ್ರ್ಯವಾಗಿ ನಾವು ಬಾಳಿ, ಬದುಕಲು ಸಾಧ್ಯವಾಯಿತು.
ಸ್ವಾತಂತ್ರ್ಯ ಬಂದು ಸಂವಿಧಾನ ರಚನೆಯಾಗಿ ಮತದಾನ ಹಕ್ಕು, ವಾಕ್ ಸ್ವಾತಂತ್ರ್ಯ, ಶಾಂತಿ, ಸೌಹರ್ದತೆ, ಸಾಮಾನತೆಯಿಂದ ನೆಮ್ಮದಿಯ ಜೀವನ ಬಾಳಲು ಹಾಗೂ ಮಹಿಳೆಯರಿಗೆ ಸಾಮಾನತೆ ಹಕ್ಕು ನೀಡಲಾಯಿತು.
ಇಂದಿನ ಯುವ ಸಮೂಹ ಸ್ವಾತಂತ್ರ್ಯ ಹೋರಾಟ ಮಹತ್ವ ಮತ್ತು ಹೋರಾಟದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳ ಆದರ್ಶ ಸಿದ್ದಾಂತಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಮತ್ತು ದೇಶದ ಅಭಿವೃದ್ದಿ ಕೈಜೋಡಿಸಿ ಎಂದು ಕಾಲ್ನಡಿಗೆ ಜಾಥದ ಮೂಲಕ ಅರಿವು ಮೂಡಿಸಲಾಯಿತು.
ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ.ಬಾಬಣ್ಣ, ಎಸ್.ಜಿ.ಸುರೇಶ್, ಕೆ.ಜಿ.ರವಿ, ಡಿ.ರಾಮಚಂದ್ರ, ಡಾಶೋಭ, ರೇಣುಕಾಂಬ, ಮಂಜೇಗೌಡ, ಬಿ.ರುದ್ರೇಶ್, ಮಂಜುನಾಥ್ ಎನ್ , ಸಂತೋಷ್ ಕುಮಾರ್ ನಾಯ್ಕ್, ಹೆಚ್.ಬಿ.ಹರೀಶ್, ಉಮೇಶ್, ಸಂತೋಷ್ , ನರಸಿಂಹರವರು ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಪಾಲ್ಗೊಂಡಿದ್ದರು.
ಕಾಲ್ನಡಿಗೆ ಜಾಥಾ ಬಿಬಿಎಂಪಿ ಕೇಂದ್ರ ಕಛೇರಿಯಿಂದ ಆರಂಭವಾಗಿ ಕಂಠೀರವ ಕ್ರೀಡಾಂಗಣ ಮಾರ್ಗವಾಗಿ ಹೋಗಿ ಕಬ್ಬನ್ ಪಾರ್ಕ್ ರಸ್ತೆ ಮಾರ್ಗವಾಗಿ ಎಮ್.ಜಿ.ರಸ್ತೆ ಪ್ರವೇಶ ದ್ವಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ಗೌರವನಮನ ಸಲ್ಲಿಸುವ ಮೂಲಕ ಮುಕ್ತಾಯವಾಯಿತು.




