ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಇರಲಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಅವರು ಈಗಾಗಲೇ ಚಿಂತಿಸಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.
ಕಾಂಗ್ರೆಸ್ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ? ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದರು.




