ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನಾಯಕರು

3 years ago

ಬೆಂಗಳೂರು: ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸಮಾರಂಭ ನಡೆಯಿತು. ಬಿಜೆಪಿ ಮತ್ತು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ನೂರಾರು ಕಾರ್ಯಕರ್ತರುಗಳು ಸೇರ್ಪಡೆ ಸಮಾರಂಭ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ರವರು, ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿ, ರಾಜಾಜಿನಗರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ, ಮಾಜಿ ಮಹಾಪೌರ ಜೆ.ಹುಚ್ಚಪ್ಪ, ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜುರವರು, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಬಿ.ಟಿ.ಶ್ರೀನಿವಾಸಮೂರ್ತಿ, ಕೃಷ್ಣಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎಂ.ಆನಂದ್, ವಿ.ಎಸ್.ಆರಾಧ್ಯ, ಶಂಶೀರ್ ಬೇಗ್ ,ಶಿವಕುಮಾರ್ ,ಕುಮಾರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪರಿಸರ ರಾಮಕೃಷ್ಣ, ಸುಧೀಂದ್ರ, ನಟರಾಜ್ ಪಾಲ್ಗೊಂಡಿದ್ದರು.

Leave a Reply