6 ಲೋಕಸಭೆ ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ

2 years ago

ಬೆಂಗಳೂರು/ದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಲು ರಣತಂತ್ರ ರೂಪಿಸುತ್ತಿರುವ‌ ಬಿಜೆಪಿ ಹೈಕಮಾಂಡ್ ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು  ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರೊಂದಿಗೆ ಜೆ.ಪಿ.ನಡ್ಡಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕೇಂದ್ರ ಗೃಹಸಚಿವ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.

ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಉಭಯ ಪಕ್ಷಗಳ ಮುಖಂಡರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಥ್ ನೀಡುತ್ತಿದ್ದು, ಸಭೆಯಲ್ಲಿ ಜೆಡಿಎಸ್ 28 ಕ್ಷೇತ್ರಗಳ ಪೈಕಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂಬುದರ ಬಗ್ಗೆ ನಿರ್ಧಾರ ಆಗುವ ಸಾಧ್ಯತೆ ಇದೆ.

ಲಭ್ಯವಿರುವ ಮೂಲಗಳ ಪ್ರಕಾರ, ಜೆಡಿಎಸ್ 28 ಕ್ಷೇತ್ರಗಳ ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮೈಸೂರು-ಕೊಡಗು ಸೇರಿದಂತೆ ಆರು ಕ್ಷೇತ್ರಗಳನ್ನು ತನಗೆ ನೀಡಬೇಕು ಎಂದು ಬೇಡಿಕೆ ಇದೆ.

Leave a Reply