ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನೂರಾರು ಕಾರ್ಯಕರ್ತರು

4 years ago

ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಬಿಡದಿ ಹೋಬಳಿಯ ಅಬ್ಬನಕುಪ್ಪೆ ಮತ್ತು ಮೆಡನಹಳ್ಳಿಯಲ್ಲಿ ಸ್ಥಳೀಯ ಮುಖಂಡರಾದ ಬೆಟ್ಟಸ್ವಾಮಿಯವರ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು.

ಈ ವೇಳೆ ಪಕ್ಷಕ್ಕೆ ಸೇರಿದ ನಾಯಕರಿಗೆ ಪಕ್ಷದ ಶಾಲು ಹೊದೆಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಟರಾಜ್, ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಹಾಗೂ ಬಿಡದಿ ಪುರಸಭಾ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Leave a Reply