ಬಿಜೆಪಿ ಜೊತೆ ಮೈತ್ರಿಯಿಂದ ಬೇಸರಗೊಂಡ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ: ಡಿ.ಕೆ.ಶಿವಕುಮಾರ್
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಂಗಳೂರು: ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ ನಾಯಕರ ಅನಿಸಿಕೆ ಆಧರಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್ ಗೆ ರವಾನಿಸಿದ್ದೇವೆ. ಸೋಮವಾರ ಕಾಂಗ್ರೆಸ್ಸಿನ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರುತ್ತಿದ್ದು, ಅದಾದ ಬಳಿಕ ಪಟ್ಟಿ ಪ್ರಕಟವಾಗಲಿ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಪರಿಣಾಮ ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು ಐದರಿಂದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಇದೀಗ ಅಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿಲ್ಲ. ಹೀಗಾಗಿ ಬೇಸರಗೊಂಡಿರುವ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲು ಸಜ್ಜುಗೊಂಡಿದ್ದಾರೆ. ಸದ್ಯದಲ್ಲೇ ಸಾಕಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.




