ಬೆಂಗಳೂರು: ನಾಯಕತ್ವದ ಕೊರತೆಯಿಂದ ತತ್ತರಿಸಿರುವ ಜೆಡಿಎಸ್ ಶಾಸಕರು ಇದೀಗ ದೊಡ್ಡ ಪ್ರಮಾಣದಲ್ಲಿ ಪಕ್ಷಾಂತರಕ್ಕೆ ಸಜ್ಜುಗೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ವಯೋ ಸಹಜ ಕಾರಣದಿಂದಾಗಿ ಪಕ್ಷ ಸಂಘಟನೆಯಲ್ಲಿ ತೊಡಗಲು ಸಾಧ್ಯವಾಗುತ್ತಿಲ್ಲ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದ, ಪಕ್ಷದ ವಿದ್ಯಮಾನಗಳ ಬಗ್ಗೆ ಅಷ್ಟಾಗಿ ಗಮನ ಹರಿಸುತ್ತಿಲ್ಲ. ತಮ್ಮ ಪುತ್ರರ ವಿರುದ್ಧ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಎಚ್ ಡಿ ರೇವಣ್ಣ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿಲ್ಲ. ಶಾಸಕಾಂಗ ಪಕ್ಷದ ನಾಯಕರಾಗಿರುವ ಸುರೇಶ್ ಬಾಬು ಅಷ್ಟೊಂದು ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ ಎಂದು ಬೇಸರಗೊಂಡಿರುವ ಶಾಸಕರು ಇದೀಗ ತಮ್ಮ ಭವಿಷ್ಯದ ಹೆಸರಲ್ಲಿ ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ ಎಂದು ಜೆಡಿಎಸ್ ಮೂಲಗಳಿಂದ ತಿಳಿದುಬಂದಿದೆ.
ಈ ರೀತಿ ಆತಂಕದಲ್ಲಿರುವ ಶಾಸಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಸಂಪರ್ಕಿಸಿ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡುತ್ತಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.
ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಅವರ ಪುತ್ರ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ದೇವದುರ್ಗ ಶಾಸಕಿ ಕರೆಮ್ಮಾ, ಶಿವಮೊಗ್ಗ ಗ್ರಾಮೀಣ ಶಾಸಕಿ ಶಾರದಾ ಪೂರ್ಯಾನಾಯಕ್, ಹನೂರು ಕ್ಷೇತ್ರದ ಶಾಸಕ ಮಂಜುನಾಥ್, ಯಾದಗಿರಿ ಕ್ಷೇತ್ರದ ಶಾಸಕ ಕುಂದಕೂರು ಸೇರಿದಂತೆ ಹಲವು ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಸೇರ್ಪಡೆಯಾದರೆ ಎಲ್ಲರಿಗೂ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನದ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದ್ದು ಹಲವು ಶಾಸಕರು ಕಾಂಗ್ರೆಸ್ ಭರವಸೆ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ಪಡೆದಿರುವ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕರನ್ನು ಸಂಪರ್ಕಿಸಿ ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ ಎಂದು ಗೊತ್ತಾಗಿದೆ.




