ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಜೆಡಿಎಸ್ ನ ಹಲವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು ಈ ಎರಡೂ ಪಕ್ಷಗಳುವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ ಗೊಂದಲ ಇರುವುದಿಲ್ಲ ಎಂದರು.
ನಮ್ಮದು ಜಾತ್ಯಾತೀತ ಸಿದ್ಧಾಂತ. ಹೀಗಾಗಿ ಜಮೀರ್ ಅಹ್ಮದ್ ಖಾನ್ ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಳ್ಳಲು ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ. ಬಿಜೆಪಿ, ಜೆಡಿಎಸ್ ಬೇಗ ವಿಲೀನವಾದಷ್ಟೂ ನಮಗೇ ಒಳ್ಳೆಯದು. ಅವರು ಬೇಗ ತೀರ್ಮಾನ ಮಾಡಿದರೆ ನಾವು ನಮ್ಮ ತೀರ್ಮಾನ ಮಾಡಿಕೊಳ್ಳಬಹುದು. ಈಗ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಆಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದರು.
ಅನೇಕ ಕ್ಷೇತ್ರಗಳಲ್ಲಿ ಬಹಳ ಗೊಂದಲಗಳಿವೆ. ನಮ್ಮ ಭವಿಷ್ಯ ಏನು ಎಂಬ ಪ್ರಶ್ನೆಯಲ್ಲಿದ್ದಾರೆ. ಬೆಂಗಳೂರು ನಗರದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನೇಕರು ಉತ್ಸುಕರಾಗಿದ್ದಾರೆ ಎಂದರು.
ಬೆಂಗಳೂರು ನಗರದಲ್ಲಿ ನಮ್ಮ ಸರ್ಕಾರ ಮಾಡುತ್ತಿರುವ ಕೆಲಸವನ್ನು ಬಿಜೆಪಿ ನಾಯಕರೇ ಸ್ವಾಗತಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ, ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಖಾತಾ ಪರಿವರ್ತನೆ, ಆಸ್ತಿ ದಾಖಲೆಗಳನ್ನು ಸರಿಪಡಿಸುತ್ತಿರುವುದನ್ನು ನೋಡಿದರೆ, ನಮಗೆ ಭವಿಷ್ಯವಿಲ್ಲ ಎಂದು ಬಿಜೆಪಿ ನಾಯಕರೇ ನಮ್ಮ ಬಳಿ ಹೇಳಿಕೊಂಡಿದ್ದಾರೆ. ಹೀಗಾಗಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಮೊನ್ನೆ ದಳದವರು ನಾವು ಫ್ರೆಂಡ್ಲಿ ಫೈಟ್ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ದಯವಿಟ್ಟು ಫ್ರೆಂಡ್ಲಿ ಫೈಟ್ ಬೇಡ, ನೇರವಾಗಿ ಹೋರಾಟ ಮಾಡಿ. ನೀವು ಒಟ್ಟಾಗಿ ಸೀಟು ಹಂಚಿಕೊಂಡು ಹೋರಾಟ ಮಾಡಿ. ನಿಮ್ಮ ಫ್ರೆಂಡ್ಲಿ ಫೈಟ್ ನಿಂದ ನಿಮ್ಮ ಕಾರ್ಯಕರ್ತರಿಗೆ ಗೊಂದಲವಾಗುತ್ತದೆ. ನೇರವಾಗಿ ಹೋರಾಟ ಮಾಡಲು ನಾವು ಸಿದ್ಧವಿದ್ದೇವೆ ಎಂದು ಸವಾಲು ಹಾಕಿದರು.
ರಾಜಕಾರಣದಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಆದರೆ ನಾವು ಗೆಲ್ಲುತ್ತೀವೋ, ಸೋಲುತ್ತೀವೋ. ಆದರೆ ಪಾಲಿಕೆ ಚುನಾವಣೆ ಮಾಡುವ ಬಗ್ಗೆ ಸರ್ಕಾರ ಈಗಾಗಲೇ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಇದರ ಜೊತೆಗೆ ಈ ವರ್ಷವನ್ನು ಚುನಾವಣಾ ವರ್ಷ ಎಂದು ಪರಿಗಣಿಸಲಾಗಿದ್ದು, ಈ ವರ್ಷವೇ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುವುದು. ಈ ಬಗ್ಗೆ ಸಿಎಂ ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚಿಸಿ ಇರುವ ಕಾನೂನು ಅಡೆತಡೆ ನಿವಾರಣೆಗೆ ತೀರ್ಮಾನಿಸಿದ್ದಾರೆ. ಹೀಗಾಗಿ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.
ಪಕ್ಷಕ್ಕೆ ಬರುವುದು, ವಾಪಸ್ ಹೋಗುವುದು ಮಾಡಬೇಡಿ. ಜೆಡಿಎಸ್ ಪಕ್ಷವನ್ನು ಅವರು ತಮ್ಮ ವೈಯಕ್ತಿಕ ಆಸ್ತಿಯಂತೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಒಂದು ಸಿದ್ಧಾಂತ, ನೀತಿ ಇಲ್ಲ. ನೀವು ಬಂದ ಮೇಲೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ, ಜನರ ಸೇವೆ ಮಾಡಿ. ನಿಮ್ಮ ಸರ್ಕಾರ ಆಡಳಿತದಲ್ಲಿದ್ದು, ಇದನ್ನು ಉಪಯೋಗಿಸಿಕೊಳ್ಳಿ ಎಂದರು.




