ಬೆಂಗಳೂರು: ಸುಳ್ಳು ಆರೋಪ ಪ್ರಕರಣದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಖ್ಯಾತಿಗೆ ಅಪಚಾರ ಉಂಟಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಧರ್ಮಸ್ಥಳದ ಜೊತೆ ನಾವಿದ್ದೇವೆ ಎಂದು ಘೋಷಿಸುವ ಸತ್ಯ ಯಾತ್ರೆ ನಡೆಸುವುದಾಗಿ ಘೋಷಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಯಾತ್ರೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಜೆಡಿಎಸ್, ಆಗಸ್ಟ್ 31ರಂದು ಹಾಸನದಿಂದ ಧರ್ಮಸ್ಥಳಕ್ಕೆ ಈ ಯಾತ್ರೆ ಕೈಗೊಳ್ಳಲಾಗುತ್ತದೆ. ಜೆಡಿಎಸ್ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ಹಾಸನದ ಕಂದಲಿಯಲ್ಲಿ ನಾಳೆ ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ಸಮಾವೇಶಗೊಳ್ಳಲಿದ್ದಾರೆ. ಅಲ್ಲಿ ಉಪಹಾರ ಸೇವಿಸಿದ ನಂತರ ಯಾತ್ರೆ ಆರಂಭಿಸಲಿದ್ದಾರೆ.
ಯಾತ್ರೆ ಹಿನ್ನಲೆಯಲ್ಲಿ ವಸ್ತ್ರ ಸಂಹಿತೆ ಹಾಗೂ ಯಾತ್ರೆಯ ಮಾರ್ಗದ ಬಗ್ಗೆ ಮಾಹಿತಿ ನೀಡಲಾಗಿದೆ. ತುರ್ತು ಸೇವೆಗಳಿಗೆ ಪಕ್ಷದ ಮುಖಂಡರನ್ನು ನಿಯೋಜಿಸಲಾಗಿದೆ. ಹಾಸನದಿಂದ ಶಿರಾಡಿಘಾಟ್ ಮೂಲಕ ಯಾತ್ರೆ ಧರ್ಮಸ್ಥಳವನ್ನು ಸೇರುವ ಕಾರ್ಯಕ್ರಮವಿದೆ.
ಕೊಟ್ಟಿಗೆಹಾರ, ಸಂಪಾಜೆ ಘಾಟ್, ಆಗುಂಬೆ ಹಾಗೂ ಚಾರ್ಮಾಡಿ ಘಾಟ್ ಮೂಲಕ ಬರುವವರಿಗೆ ಮಧ್ಯಾಹ್ನ ಒಂದು ಗಂಟೆಯೊಳಗೆ ನೇತ್ರಾವತಿ ನದಿ ಬಳಿಯ ಪಾರ್ಕಿಂಗ್ ಸ್ಥಳ ತಲುಪುವಂತೆ ಜೆಡಿಎಸ್ ಕೋರಿದೆ.
ಎಲ್ಲರಿಗೂ ಗುರುತಿನ ಚೀಟಿ ವಿತರಿಸಿ ನೇತ್ರಾವತಿ ನದಿ ಬಳಿಯ ಪಾರ್ಕಿಂಗ್ ಸ್ಥಳದಿಂದ ಧರ್ಮಸ್ಥಳದವರೆಗೆ ಒಂದು ಕಿ.ಮೀ. ಪಾದಯಾತ್ರೆ ಮಾಡಲು ಉದ್ದೇಶಿಸಲಾಗಿದೆ. ಅನಂತರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅನಂತರ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ತಮ್ಮ ಊರುಗಳಿಗೆ ಮರಳುವ ಯೋಜನೆ ರೂಪಿಸಲಾಗಿದೆ.




