ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮುಂಬರುವ ಮಾರ್ಚ್ 01ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಕೂಡಲೆ ಆನ್‍ಲೈನ್‍ನಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ನೀಡುವ ಸಲುವಾಗಿ ಭಾಗವಹಿಸಲಿವೆ. 18 ರಿಂದ 35 ವರ್ಷದ ವಯೋಮಿತಿಯ, ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರು ಆನ್‍ಲೈನ್‍ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ನೊಂದಣಿಗಾಗಿ ಜಿಲ್ಲಾ ಅಧಿಕೃತ ವೆಬ್‍ಸೈಟ್ ಹಾಗೂ ಜಾಹೀರಾತಿನಲ್ಲಿ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್: https://forms.gle/7pTxbGPVKAFCSYaX7 ಹಾಗೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೊಂದಣಿ ಮಾಡಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.




