ದಾವಣಗೆರೆಯಲ್ಲಿ ಮಾ.25 ರಂದು ಉದ್ಯೋಗಮೇಳ

1 year ago

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಇದೇ ಮಾ.25 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳಲ್ಲಿನ ಕೊಠಡಿ ಸಂಖ್ಯೆ-51ರಲ್ಲಿನ ಉದ್ಯೋಗ ವಿನಿಮಯ ಕೇಂದ್ರದಲ್ಲಿ “ಉದ್ಯೋಗಮೇಳ” ಆಯೋಜಿಸಲಾಗಿದೆ.

ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಐ.ಟಿ.ಐ, ಡಿಪ್ಲೋಮಾ, ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಸ್ವವಿವರದ ಪ್ರತಿ ಮತ್ತು ಆಧಾರ್ ನಂಬರ್‍ನೊಂದಿಗೆ  ಭಾಗವಹಿಸಿ, ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7483808321 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

Leave a Reply