ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಬಹುದು.




