ಕಾರವಾರ: ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಕೊಡಿಸುವ ಆಸೆ ಹುಟ್ಟಿಸಿ ಸುಮಾರು 30 ಮಂದಿ ಯುವಕರಿಂದ 52 ಲಕ್ಷ ರೂ. ಹಣ ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಆರೋಪಿಗಳಾದ ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದ್ರಾಬಾದ್ ಮೂಲದ ಸುಜಾತ ಜಮ್ಮಿ, ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ವಂಚನೆ ನಡೆಸುತ್ತಿದ್ದರು.
ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ ಹಾಗೂ ಕೇರಳ ರಾಜ್ಯದ ನಿರುದ್ಯೋಗಿ ಯುವಕರಿಗೆ ಬಲೆ ಬೀಸಿದ್ದ ತಂಡ, ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಖಾಲಿ ಇದೆ ಎಂಬ ಜಾಲತಾಣದ ಪ್ರಕಟಣೆ ತೋರಿಸಿ ಆಮಿಷ ಒಡ್ಡಿತ್ತು. ಅಲ್ಲಿ ಕೆಲಸ ಮಾಡಿದರೆ ನೀವು ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂದು ನಂಬಿಸಿ ಸುಮಾರು 30 ಜನರಿಂದ 52,01,185 ರೂ ಹಣವನ್ನು ಪಡೆದು ವಂಚನೆ ನಡೆಸಿದ್ದರು.
ಮಂಗಳೂರು ಹಾಗೂ ಕಾಸರಗೋಡಿನಲ್ಲಿ ಉತ್ತಮ ಸಂಪರ್ಕ ಹೊಂದಿದ್ದ ನೌಶಾದ್ ಎಂಬಾತನ ಜೊತೆ ಜಾಫರ್, ನಿರಂತರ ಸಣಪರ್ಕದಲ್ಲಿದ್ದ. ಕುವೈತ್ನಲ್ಲಿ ಕೆಲಸ ಕೊಡಿಸುವ ಈತನ ಭರವಸೆಯನ್ನ ನಂಬಿದ್ದ ನೌಶಾದ್, ತನಗೆ ಪರಿಚಯ ಇರುವ ಯುವಕರಿಗೆ ವಿಷಯ ತಿಳಿಸಿದ್ದ. ಉದ್ಯೋಗದ ಆಸೆಯಿಂದ ಹಂತ ಹಂತವಾಗಿ ಜಾಫರ್ ಖಾತೆಗೆ ಹಣವನ್ನೂ ವರ್ಗಾವಣೆ ಮಾಡಲಾಗಿತ್ತು. ಹಣ ಹಾಕುವ ಸಂದರ್ಭ ನೌಶಾದ್ ಜೊತೆ ನಿರಂತರ ಸಂಪರ್ಕದಲ್ಲಿರುತ್ತಿದ್ದ ಜಾಫರ್ ಕೆಲವೊಮ್ಮೆ ಮೊಬೈಲ್ ಸ್ವಿಚ್ಆಫ್ ಮಾಡುತ್ತಿದ್ದ. ಈ ವೇಳೆ ಅನುಮಾನಪಟ್ಟ ನೌಶಾದ್ ಪ್ರಶ್ನಿಸಿದಾಗ, ನನ್ನ ಮೇಲೆ ನಿಮಗೆ ನಂಬಿಕೆ ಇಲ್ಲದೆ ಇರಬಹುದು. ಆದರೆ, ಕುವೈತ್ನ ಡಿಫೆನ್ಸ್ ವೆಬ್ಸೈಟ್ನಲ್ಲಿ ಹಾಕಿರುವ ಪ್ರಕಟಣೆಯನ್ನಾದರೂ ನಂಬಿ ಎಂದು ಗದರಿದ್ದ. ಹೀಗಾಗಿ ಆತನನ್ನು ನಂಬಿದ್ದ ನೌಶಾದ್ ಮತ್ತೆ ಕೆಲವರ ಕಡೆಯಿಂದ ಹಣ ಹಾಕಿಸಿದ್ದಾರೆ. ಆದರೆ ಹಣ ನೀಡಿ ವರ್ಷ ಕಳೆದರೂ ಉದ್ಯೋಗದ ಬಗ್ಗೆ ಸುಳಿವಿಲ್ಲದ ಕಾರಣ ಜಾಫರ್ನನ್ನು ನೌಶಾದ್ ಮತ್ತೆ ಪ್ರಶ್ನಿಸಿದ್ದಾರೆ.
ಈ ವೇಳೆ ಮೊಬೈಲ್ ಸ್ವಿಚ್ಆಫ್ ಮಾಡಿರುವ ಆತ ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ ಎಂಬುದು ನೌಶಾದ್ ಅಳಲು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಜಾಫರ್ ಬಗ್ಗೆ ಮಾಹಿತಿ ಕಲೆಹಾಕಲಾಗಿದ್ದು, ಆತನ ಜೊತೆ ಇನ್ನಿಬ್ಬರು ಇರುವುದು ಗೊತ್ತಾಗಿದೆ. ಮೂವರು ಆರೋಪಿಗಳ ಪೈಕಿ ನೌಶಾದ್ ಕ್ವಾಜಾ ಹೊನ್ನಾವರದಲ್ಲಿಯೇ ಇದ್ದು, ಆತನನ್ನು ವಶಕ್ಕೆ ಪಡೆದು ತನಿಖೆ ಮಾಡುವಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



