ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, ಡಿ.ಸಿ.ಆಫೀಸ್, ದಾವಣಗೆರೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:8105122556, 08192-259446ನ್ನು ಸಂಪರ್ಕಿಸಬಹುದು.




