ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಜಂಟಿ ವಿಶೇಷ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ವಿಬಿಜಿ ರಾಮ್ ಜಿ ಯೋಜನೆ ಮತ್ತು ಈ ಹಿಂದಿನ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಮುಖವಾಗಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ವಿಶೇಷ ಆಸಕ್ತಿ ವಹಿಸಿದ್ದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರಿಗೆ ಕಳುಹಿಸಿದ್ದಾರೆ.
ಸದನದಲ್ಲಿ ದೊರೆಯುವ ಅವಕಾಶವನ್ನು ಬಳಸಿಕೊಂಡು ಹಿಂದಿನ ಮನರೇಗಾ ಯೋಜನೆ ವೈಫಲ್ಯಗಳನ್ನು ಬಿಚ್ಚಿಡಬೇಕು ಹಾಗೂ ಹೊಸ ಯೋಜನೆ ಎಷ್ಟು ಪರಿಣಾಮಕಾರಿಯಾಗಿದೆ ಎಂಬುದನ್ನು ತಿಳಿಸಬೇಕು ಎಂದು ಹೈಕಮಾಂಡ್ ಸೂಚಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿಗೆ ಬಿಜೆಪಿ ರಣತಂತ್ರ ರೂಪಿಸಿದೆ.
ಇದರ ಬಗ್ಗೆ ಪಕ್ಷದ ಎಲ್ಲಾ ಶಾಸಕರಿಗೆ ಸಮಗ್ರ ಮಾಹಿತಿ ನೀಡುವ ದೃಷ್ಟಿಯಿಂದ ಶಾಸಕಾಂಗ ಸಭೆ ನಡೆಸಲಾಯಿತು ಇದರಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರು ರಾಜ್ಯದ ಬಿಜೆಪಿ ಶಾಸಕರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರ ಮನರೇಗಾ ಯೋಜನೆ ಬಗ್ಗೆ ಪ್ರಸ್ತಾಪಿಸಿದ ಕೂಡಲೇ ಅದರ ವೈಫಲ್ಯಗಳ ಪಟ್ಟಿ ಮಾಡಬೇಕು ಮತ್ತು ದೇಶದ ಆಳವಡೆ ನಡೆದಿರುವ ಅಕ್ರಮ ಕುರಿತು ಸದನದಲ್ಲಿ ಮಾಹಿತಿ ನೀಡಬೇಕು ಎಂದು ಸೂಚಿಸಿ ಕೇಂದ್ರ ಮಂತ್ರಿಗಳು ಶಾಸಕರಿಗೆ ದಾಖಲೆಗಳನ್ನು ನೀಡಿದ್ದಾರೆ.
ಮುಖ್ಯವಾಗಿ ಕಾಯ್ದೆ ತಿದ್ದುಪಡಿಯನ್ನು ಸದನದಲ್ಲಿ ಹೇಗೆ ಸಮರ್ಥನೆ ಮಾಡಿಕೊಳ್ಳಬೇಕು? ಪ್ರತಿಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರ ನೀಡುವ ಕುರಿತು ಶಿವರಾಜ್‌ಸಿಂಗ್ ಚವ್ಹಾಣ್, ಶಾಸಕರಿಗೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 18 ವರ್ಷಗಳಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಾದ ದೋಷಗಳನ್ನು ಸರಿ ಮಾಡಲು ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡಿದೆ. ವಿಕಸಿತ ಭಾರತ ಹೆಸರಿನ ಬಗ್ಗೆ ಕಾಂಗ್ರೆಸ್ ಆಕ್ಷೇಪ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ ಪಾರದರ್ಶಕವಾಗಿ ಉದ್ಯೋಗ ಖಾತರಿ ನೀಡಲು ಈ ಯೋಜನೆ ತರಲಾಗಿದೆ.
ಆದರೆ ತಾವು ನಿರುದ್ಯೋಗಿಗಳಾಗುತ್ತೇವೆ ಎಂಬ ಭಯ ಕಾಂಗ್ರೆಸ್ಸಿಗರಿಗಿದೆ. ವೋಟ್ ಚೋರಿ ಎಂದು ಹೇಳುವ ಇವರು ಕೂಲಿ ಚೋರಿ ಮಾಡುತ್ತಿದ್ದರು. ಜೆಸಿಬಿ ಮೊದಲಾದ ಯಂತ್ರ ಬಳಸಿ ಕೆಲಸ ಮಾಡಿಸುತ್ತಿದ್ದರು. ಸತ್ತವರ ಹೆಸರಲ್ಲಿ ಹಣ ಬಿಡುಗಡೆಯಾಗುತ್ತಿತ್ತು. ಇದರಲ್ಲಿ ಕಾಂಗ್ರೆಸ್ ಕರ್ಯಸರ್ತೋರೇ ಇರುತ್ತಿದ್ದರು ಎಂದಿದ್ದಾರೆ.
ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ತನ್ನ ಪಾಲಿನ ಅನುದಾನ ನೀಡಬೇಕಲ್ಲ ಎಂಬ ಚಿಂತೆ ಕಾಂಗ್ರೆಸ್ ಸರ್ಕಾರಕ್ಕೆ ಕಾಡುತ್ತಿದೆ. ಆದ್ದರಿಂದಲೇ ಈ ಯೋಜನೆಯನ್ನು ವಿರೋಧ ಮಾಡಲಾಗುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡಬೇಕೆಂದು ಸೂಚಿಸಿದರು.
ವಿಬಿಜಿ ರಾಮ್ ಜಿ ಯೋಜನೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಇರುವುದರಿಂದ ನಕಲಿ ಹೆಸರು ಸೇರಿಸಲು ಸಾಧ್ಯವಿಲ್ಲ. ನಕಲಿ ಜಾಬ್‌ಕರಡ್ದರಗಳು ರದ್ದಾಗಲಿದೆ. ಆಡಳಿತಾತಕ ವೆಚ್ಚವನ್ನು ಕೇಂದ್ರ ಸರಕಾರ ಶೇ.9ಕ್ಕೆ ಏರಿಸಿದೆ. ವೇತನ ಪಾವತಿಗೂ ಕಾಲಮಿತಿ ನಿಗದಿಪಡಿಸಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಎರಡೂವರೆ ಲಕ್ಷ ಕೋಟಿ ರೂ. ನೀಡಿದ್ದರೆ, ಪ್ರಧಾನಿ ಮೋದಿಯವರ ಅವಧಿಯಲ್ಲಿ 8 ಲಕ್ಷ ಕೋಟಿ ರೂ. ಬಂದಿದೆ. ರಾಜ್ಯ ರ್ಕಾೆರ ನೀಡುವ ಪಾಲು ಕೂಡ ಉದ್ಯೋಗ ಮಾಡುವ ಬಡವರಿಗೆ ತಲುಪಲಿದೆ. ರಾಜ್ಯ ರ್ಕಾೋರಕ್ಕೆ ಕೇಂದ್ರದಿಂದ 17,000 ಕೋಟಿ ರೂ. ಬರಲಿದೆ. ಕೇಂದ್ರ ಮತ್ತು ರಾಜ್ಯದ ಪಾಲು ಸೇರಿ ಒಟ್ಟು 27,000 ಕೋಟಿ ರೂ. ಸಿಗಲಿದೆ. ತಾವು 10,000 ಕೋಟಿ ರೂ. ಕೊಡಬೇಕಿದೆ.
ಈ ಹಿಂದೆ ಕೆಲಸದ ಅವಧಿ 100 ದಿನಗಳಿದ್ದರೆ, ಈಗ 125 ದಿನಗಳಿಗೆ ಹೆಚ್ಚಿಸಲಾಗಿದೆ. ರೈತರಿಗೆ ಕೃಷಿ ಕಾರ್ಮಿಕರು ಸಿಗಲಿ ಎಂಬ ಕಾರಣಕ್ಕೆ ಮಳೆಗಾಲದಲ್ಲಿ 60 ದಿನಗಳ ಅಂತರ ನೀಡಲಾಗಿದೆ. ಅದನ್ನೂ ಕಾಂಗ್ರೆಸ್ ಪ್ರಶ್ನೆ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಗುತ್ತಿಗೆ ಪಡೆಯಲು ಅಥವಾ ಅಕ್ರಮ ಮಾಡಲು ಸಾಧ್ಯವಿಲ್ಲ. ಶಾಶ್ವತವಾದ ಆಸ್ತಿಗಳನ್ನು ನಿರ್ಮಿಸಿದರೆ ಅಭಿವೃದ್ಧಿ ಸಾಧ್ಯ. ಹೊಸ ಯೋಜನೆಯಿಂದ ನಿಜವಾದ ಫಲಾನುಭವಿಗಳಿಗೆ ಲಾಭ ದೊರೆಯಲಿದೆ. ಕಾಮಗಾರಿಗಳು ಮೊದಲೇ ನಿರ್ಧಾರವಾಗಲಿದೆ ಇದರಿಂದ ಅನುಕೂಲವಾಗಲಿದೆ ಎಂದಿದ್ದಾರೆ.




