ಗದಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ 2021-22ನೇ ಸಾಲಿನಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರುವರಿಗೆ ಆದ್ಯತೆ ನೀಡಲಾಗುತ್ತದೆ. ಈ ಮೊದಲು ಅಪ್ರೆಂಟಿಸ್ ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ.
ಗದಗ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರನ್ನು ಅಪ್ರೆಂಟಿಸ್ ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ಮಾಹೆ ತಲಾ 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು, ನಿಗದಿತ ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತ ಭವನ, ಗದಗ ಇಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು 14 ಜನೆವರಿ 2022 ರ ಒಳಗಾಗಿ ಅದೇ ಕಚೇರಿಯಲ್ಲಿ ಸಲ್ಲಿಸಬೇಕು. ತಡವಾಗಿ ಬಂದಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಠಡಿ ಸಂಖ್ಯೆ 30, ಜಿಲ್ಲಾಡಳಿತ ಭವನ, ಗದಗ ಅಥವಾ ದೂರವಾಣಿ ಸಂಖ್ಯೆ: 08372-239452ಗೆ ಸಂಪರ್ಕಿಸಬಹುದು.




