ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೈಸೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್ ಗಳಿಗೆ “ಮುಖ್ಯಮಂತ್ರಿ ಕಪ್ ಪ್ರಶಸ್ತಿ” ವಿತರಿಸಿ ಮಾತನಾಡಿದ ಅವರು, ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.
ಪತ್ರಕರ್ತರು ಸತ್ಯ ಹೇಳುತ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಯಾರಿಗೂ ಗೌರವ ತರುವುದಿಲ್ಲ ಎಂದರು.
ಮಾಧ್ಯಮಗಳಿಂದು ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.
ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಢ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವುದು ಬೇಸರದ ವಿಚಾರ ಎಂದರು.




