ಸುಸ್ಥಿತಿಗೆ ಮರಳಿದ ಅಂಗನವಾಡಿ ಕೇಂದ್ರಗಳು
ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ ಜುಲೈ 22 ರಂದು ಆಜಾದ್ ನಗದರಲ್ಲಿನ ವೆಂಕಾಭೋವಿ ಕಾಲೋನಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಸ್ಥಿತಿಗತಿ ಬಗ್ಗೆ ಗಮನ ಸೆಳೆದಿದ್ದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಭೇಟಿ ನೀಡಿದ ಪರಿಣಾಮವಾಗಿ ಅಂಗನವಾಡಿಯಲ್ಲಿ ಸ್ವಚ್ಚತೆ, ಮಕ್ಕಳನ್ನು ಮಲಗಿಸಲು ಸೊಳ್ಳೆ ಪರದೆ, ಸರ್ಕಾರದ ಮೆನು ಪ್ರಕಾರ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರ ವಿತರಣೆ ಸೇರಿದಂತೆ ಸಾಕಷ್ಟು ಬದಲಾವಣೆಯನ್ನು ಕಾಣಲಾಗಿದೆ. ಇಲಾಖೆ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮಕ್ಕಳಿಗೆ ಅತ್ಯುತ್ತಮವಾದ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಮಕ್ಕಳಿಗೆ ಆಟಿಕೆಗಳ ಉಪಯೋಗ, ಕೇಂದ್ರದ ಒಳಗೆ ಮಕ್ಕಳ ಕಲಿಕೆಗೆ ಬೇಕಾದ ಸ್ಟಿಕ್ಕರ್‌ಗಳ ಬಳಕೆ ಸೇರಿದಂತೆ ಆಹಾರ ಪದಾರ್ಥಗಳ ದಾಸ್ತಾನು ವಿವರದ ಪ್ರದರ್ಶನ, ಮೆನು ಫಲಕಗಳೆಲ್ಲವನ್ನು ಪ್ರದರ್ಶನ ಮಾಡಲಾಗಿದೆ.
ಈ ಬಗ್ಗೆ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ್ ಪ್ರತಿಕ್ರಿಯಿಸಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಮಯದಲ್ಲಿದ್ದ ಸ್ಥಿತಿಗೂ, ಈಗಿನ ಸ್ಥಿತಿಗೂ ಸಾಕಷ್ಟು ಸುಧಾರಣೆಯಾಗಿದ್ದು ಇದೇ ರೀತಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಮಕ್ಕಳಿಗೆ ಅತ್ಯುತ್ತಮವಾದ ಸೌಲಭ್ಯಗಳು ಸಿಗುವಂತಾಗಲಿ ಎಂದು ತಿಳಿಸಿದ್ದಾರೆ.



