ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾವೇರಿ ಜಿಲ್ಲಾ ಸಮಿತಿ ಸಭೆ ರಾಣೇಬೆನ್ನೂರ್ ನಲ್ಲಿ ಜರುಗಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ಉಪಸ್ಥಿತಿ ಹಾಗೂ ಜಿಲ್ಲಾಧ್ಯಕ್ಷ ಖಾಸಿಂ ರಬ್ಬಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಮತ್ತು ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗೆ ಬೆಂಬಲ ನೀಡಬೇಕು? ಎಂಬ ಪಕ್ಷದ ನಿಲುವಿನ ಕುರಿತು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ, ಹಾವೇರಿ ಗದಗ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 2008ರಲ್ಲಿ ರೂಪುಗೊಂಡ ಈ ಕ್ಷೇತ್ರದಲ್ಲಿ ಮೊದಲಿನಿಂದಲೂ ಬಿಜೆಪಿಯೇ ಗೆದ್ದು ಬರುತ್ತಿದೆ. ಆದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಶೂನ್ಯ ಯಾವುದೇ ಕೈಗಾರಿಕೆಗಳು ಇಲ್ಲ. ಅಂತವುಗಳನ್ನು ತರಲು ಬಿಜೆಪಿ ಅಭ್ಯರ್ಥಿ ಪ್ರಯತ್ನ ಪಟ್ಟಿಲ್ಲ ಎಂದು ಆರೋಪಿಸಿದರು.
ಕ್ಷೇತ್ರದ ಮತದಾರರು ಮತದಾನಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. 2019ರಲ್ಲಿ ಶೇ. 74.01ರಷ್ಟು ಮತದಾನ ಇಲ್ಲಿ ಆಗಿತ್ತು. 2024ರಲ್ಲಿ ಅದಕ್ಕಿಂತಲೂ ಹೆಚ್ಚು ಮತದಾನ ಆಗಬಹುದು ಎಂದು ನಿರೀಕ್ಷಿಸಲಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇವಲ ಮತ ಹಾಕುವುದಷ್ಟೇ ಮುಖ್ಯವಲ್ಲ. ಆ ನಂತರದ ಆಗುಹೋಗುಗಳಲ್ಲಿ ಜನರು ಪಾಲ್ಗೊಳ್ಳಬೇಕು. ಅಭಿವೃದ್ಧಿಯಲ್ಲಿ ಜನರನ್ನು ಪಾಲುದಾರರನ್ನಾಗಿ ಮಾಡಬೇಕು. ಅದಕ್ಕೆ ಜನರ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ ಎಂದರು.
ಈ ಬಗ್ಗೆ ಎಸ್ಡಿಪಿಐ ಪಕ್ಷ ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಎಸ್ಸಿ, ಎಸ್ಟಿ, ಓಬಿಸಿ, ಮೈನಾರಿಟೀಸ್ ಸಮುದಾಯಗಳು ತಮ್ಮ ಮತದ ಮೌಲ್ಯವನ್ನು ಅರಿತು ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದರು.
ರಾಜ್ಯಾದ್ಯಂತ ಯಾವ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂಬ ಬಗ್ಗೆ ಲೋಕಸಭಾ ಕ್ಷೇತ್ರವಾರು ಕಾರ್ಯಕರ್ತರ ಸಮಾವೇಶವನ್ನು ನಡೆಸಿ ಅಭಿಪ್ರಾಯವನ್ನು ಸಂಗ್ರಹಿಸಲಾಗುತಿದ್ದು ಇನ್ನಷ್ಟೇ ಅಂತಿಮ ತೀರ್ಮಾನವಾಗಬೇಕಿದೆ ಎಂದರು.
ಖಾಸಿಂ ರಬ್ಬಾನಿ ಮಾತನಾಡಿ, ಮತದಾರ ಬಂಧುಗಳು ಮೇ 7ರಂದು ನಡೆಯಲಿರುವ ದ್ವಿತೀಯ ಹಂತದ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಮ್ಮ ಮತವನ್ನು ಚಲಾಯಿಸಬೇಕು ಎಂದು ವಿನಂತಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಮತ ಚಲಾಯಿಸಿದ ಬೂತ್ ಲಿಸ್ಟ್ ನಲ್ಲಿ ತಮ್ಮ ಮತ ಇರದಿದ್ದಲ್ಲಿ ಬೇರೆ ಬೂತ್ ನಲ್ಲಿ ಇರುವ ಸಾಧ್ಯತೆ ಇರುತ್ತದೆ. ಆದುದರಿಂದ ಚುನಾವಣಾ ಆಯೋಗದ ವೋಟರ್ ಹೆಲ್ಪರ್ ಆಪ್ ನಲ್ಲಿ ತಮ್ಮ ಮತ ಯಾವ ಬೂತ್ ನಲ್ಲಿ ಇದೆ ಎಂದು ವೋಟರ್ ಚುನಾವಣಾ ಗುರುತಿನ ಚೀಟಿಯ ಮೂಲಕ ಪರಿಶೀಲನೆ ಮಾಡಬಹುದಾಗಿದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಜಾಗೃತಿ ಮೂಡಿಸುವ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಜಿಲಾನಿ ಮೆದೂರ್, ಜಿಲ್ಲಾ ಕಾರ್ಯದರ್ಶಿ ಯಾಸೀರ ಇರ್ಷಾದ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




