ಬೆಂಗಳೂರು: ನಾಡದ್ರೋಹಿ @INCKarnataka ಸರ್ಕಾರಕ್ಕೆ ಕನ್ನಡವೆಂದರೆ ನಿಕೃಷ್ಟ, ಕನ್ನಡ ನಾಡಿನ ಕಲೆ ಸಂಸ್ಕೃತಿ ಅಂದರೆ ಕನಿಷ್ಠ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಗಂಗೂಬಾಯಿ ಹಾನಗಲ್ ಸ್ಮರಣಾರ್ಥ ಸ್ಥಾಪಿಸಲಾಗಿರುವ ಗುರುಕುಲಕ್ಕೆ ಸರ್ಕಾರ ಅನುದಾನ ನೀಡದಿರುವ ಕುರಿತ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅಶೋಕ್, ಸಿಎಂ @siddaramaiah ಅವರ ಸರ್ಕಾರದಲ್ಲಿ ಸಿಕ್ಕಸಿಕ್ಕವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ನಿಗಮ ಮಂಡಳಿಗಳಲ್ಲಿ, ಟೆಂಡರ್ ಕಿಕ್ ಬ್ಯಾಕ್ ಗಳಲ್ಲಿ ನೂರಾರು ಕೋಟಿ ಲೂಟಿ ಮಾಡಲು ದುಡ್ಡಿದೆ, ಆದರೆ ನಾಡಿನ ಹೆಮ್ಮೆಯ ಸಂಗೀತ ಸರಸ್ವತಿ ಪದ್ಮಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರ ಜ್ಞಾಪಕಾರ್ಥವಾಗಿ ಹುಬ್ಬಳ್ಳಿಯಲ್ಲಿ ಸ್ಥಾಪಿಸಿರುವ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ವಾರ್ಷಿಕ ₹1.25 ಕೋಟಿ ಅನುದಾನ ನೀಡಲು ನಾಡದ್ರೋಹಿ @INCKarnataka ಸರ್ಕಾರದ ಬಳಿ ದುಡ್ಡಿಲ್ಲ ಎಂದಿದ್ದಾರೆ.
ಸಿಎಂ @siddaramaiah ನವರೇ ಕಲಾವಿದರಿಗೆ ಪಿಂಚಣಿ ನೀಡುವುದಕ್ಕೆ ಹಣವಿಲ್ಲ, ಕಲಾತಂಡಗಳಿಗೆ ಧನ ಸಹಾಯಕ್ಕೆ ದುಡ್ಡಿಲ್ಲ. ರಾಜ್ಯ, ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ದುಡ್ಡಿಲ್ಲ ರಂಗಮಂದಿರ, ಬಯಲು ಮಂದಿರಗಳಿಗೆ ಹಣ ನೀಡುತ್ತಿಲ್ಲ, ಕನ್ನಡ-ಸಂಸ್ಕೃತಿ ಇಲಾಖೆಗೆ ನಿಗದಿ ಹಣ ನೀಡುತ್ತಿಲ್ಲ. ಕಲೆ ಮತ್ತು ಸಂಸ್ಕೃತಿಗೆ ಮೀಸಲು ಹಣವಿಲ್ಲ, ಕಲಾಸಂಘಗಳಿಗೂ ನೀಡುವುದಕ್ಕೂ ರೊಕ್ಕವಿಲ್ಲ. ಇದೇನಾ ನೀವು ನಮ್ಮ ನಾಡಿನ ಕಲೆ ಸಂಸ್ಕೃತಿಗೆ ಬೆಲೆ ನೀಡುವ ಪರಿ? ಎಂದು ಪ್ರಶ್ನಿಸಿದ್ದಾರೆ.
ಚುನಾವಣೆ ಬಂದರೆ ಸಾಕು ಭಾಷೆಯ ವಿಷಯದಲ್ಲಿ ಕೀಳು ರಾಜಕಾರಣ ಮಾಡುವ @siddaramaiah ನವರು ಕನ್ನಡದ ಕೆಲಸಕ್ಕೆ ಕವಡೆ ಕಿಮ್ಮತ್ತು ಕೊಡುತ್ತಿಲ್ಲ. ನಾಡು, ನುಡಿ, ಸಂಸ್ಕೃತಿಯ ಬೆಳವಣಿಗೆಗೆ ನೀಡಬೇಕಿದ್ದ ಅನುದಾನಕ್ಕೆ ಕೊಕ್ಕೆ ಹಾಕುವ ಮೂಲಕ @INCKarnataka ಸರ್ಕಾರ ಮಾತೃಭಾಷೆಗೆ, ನಾಡಿನ ಸಂಸ್ಕೃತಿಗೆ ದ್ರೋಹ ಬಗೆದಿದೆ ಎಂದಿದ್ದಾರೆ.




