ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶ್ರೀ ಮಹದೇವಪ್ಪ ಪ್ರತಿಷ್ಠಾನ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ
ಮಕ್ಕಳು ಕೆಟ್ಟ ಚಟಗಳಿಂದ ದೂರವಿರಿ, ಪ್ರೀತಿ ವ್ಯಾಮೋಹಕ್ಕೆ ಬಲಿಯಾಗಬೇಡಿ: ಡಾ.ನಾಗಲಕ್ಷ್ಮಿ ಚೌಧರಿ
ಬೆಂಗಳೂರು: ಕಮಲಾನಗರದ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ನಲ್ಲಿ ಶ್ರೀ ಮಹದೇವಪ್ಪ ಪ್ರತಿಷ್ಠಾನದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ, ಎಸ್.ಎಸ್.ಎಲ್.ಸಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ, ಮಾಜಿ ಮೇಯರ್ ಜೆ.ಹುಚ್ಚಪ್ಪ, ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ, ನಾಯಕರಾದ ಎಮ್.ಶಿವರಾಜು, ಕಲಾ ದರ್ಪಣ ಆರ್ಟ್ಸ್ ಸಂಸ್ಥೆಯ ಅಧ್ಯಕ್ಷೆ ಹೇಮಾ ವಿನಾಯಕ್ ಪಾಟೀಲ್ ದೀಪ ಬೆಳಗಿಸಿ ಉಚಿತ ನೋಟ್ ಪುಸ್ತಕ ವಿತರಣಾ, ಎಸ್.ಎಸ್.ಎಲ್.ಸಿ.ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ನಾಗಲಕ್ಷ್ಮಿಚೌಧರಿ, ಕನ್ನಡದ ಮಕ್ಕಳು ಶಿಕ್ಷಣ ಜೊತೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು. ಜನರಿಂದ ಜನರಿಗೆ ಹಾಡಿನ ಮೂಲಕ ಹೇಳುವ ಪದಗಳಿಗೆ ಜಾನಪದ ಎಂದು ಹೇಳುತ್ತಾರೆ. ನಮ್ಮ ಕಲೆ, ಸಾಹಿತ್ಯ ಉಳಿಯಬೇಕು, ಬೆಳೆಯಬೇಕು ಎಂದರು.
ಶಿಕ್ಷಕರು ಮಕ್ಕಳ ಮನಸ್ಸನ್ನು ಅರಿಯಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಬದಲಾವಣೆ ತರಲು ಸಾಧ್ಯ. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕುತ್ತಿರಲಿಲ್ಲ, ಚಿಕ್ಕವಯಸ್ಸಿನಲ್ಲಿ ಮದುವೆ ಮಾಡುತ್ತಿದ್ದರು. ಇದರಿಂದ ಶಿಕ್ಷಣದಿಂದ ಬಾಲಕಿಯರು ವಂಚಿತರಾಗುತ್ತಿದ್ದರು. ಆದರೆ ಕಾಲ ಬದಲಾಗಿದೆ. ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ. ಸ್ವಾಭಿಮಾನಿ ಬದುಕು ಸಾಗುತ್ತಿದ್ದಾರೆ. ಮಕ್ಕಳು ತಮ್ಮ ಕಾಲ ಮೇಲೆ ನಿಲ್ಲಬೇಕಾದರೆ ಮಕ್ಕಳು ಕೆಟ್ಟ ಚಟಗಳಿಂದ ದೂರವಿರಬೇಕು ಮತ್ತು ಪ್ರೀತಿ ವ್ಯಾಮೋಹಕ್ಕೆ ಬಲಿಯಾಗಬಾರದು ಎಂದರು.
ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಯಾದ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾದರು. ಸರ್ಕಾರಿ ಶಾಲೆ ಮಕ್ಕಳು ನೀವು ಏನಾ ಬೇಕಾದರು ಆಗಬಹುದು. ನೀವು ಇಷ್ಟದಂತೆ ಸಾಧನೆ ಮಾಡುವ ನಿಮ್ಮಲ್ಲಿ ಛಲವಿದೆ. ಮಕ್ಕಳಿಗೆ ಯಾವುದಾದರು ತೊಂದರೆಯಾದರೆ ಸಹಾಯವಾಣಿಗೆ ಕರೆ ಮಾಡಿ ಮತ್ತು ಮಕ್ಕಳ ಸುರಕ್ಷತೆ ಕುರಿತು ಪೊಲೀಸ್ ಇಲಾಖೆಯವರು ಮಕ್ಕಳಿಗೆ ಅರಿವು ಮೂಡಿಸಬೇಕು. ಬಡವರ ಮಕ್ಕಳು ಬೆಳಯಬೇಕು ಎಂದರೆ ಶಿಕ್ಷಣ ಪಡೆಯಬೇಕು, ಶಿಕ್ಷಣ ಹುಲಿಯ ಹಾಲಿದ್ದಂತೆ, ಅದನ್ನ ಕುಡಿದವನು ಘರ್ಜಿಸಲೇಬೇಕು ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಹೇಳಿದರು ಎಂದು ಹೇಳಿದರು.
ಪ್ರಾಂಶುಪಾಲರಾದ ಕುಮುದಾಕ್ಷಿ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಜನಾರ್ಧನ್, ಮಲ್ಲಿಕಾ, ನಟರಾಜ್, ಕಲಾವಿದರಾದ ಓಬಳೇಶ್ ಉಪಸ್ಥಿತರಿದ್ದರು.
ಜೂನಿಯರ್ ವಿಷ್ಣುವರ್ಧನ್ ಅವರಿಂದ ಕಲಾ ಪ್ರದರ್ಶನ ಹಾಗೂ ನೆಲಸೊಗಡು ಲಕ್ಷ್ಮಣ್, ನಂಜಪ್ಪ ಅವರಿಂದ ಜಾನಪದ ಗೀತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.












