ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಆತ್ಮೀಯ ಪದಾಧಿಕಾರಿಗಳೇ ಮತ್ತು ಕಾರ್ಯಕರ್ತ ಬಂಧುಗಳೇ, ದಿನಾಂಕ 21-11-2021ರಂದು ನಡೆಯುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಯಾರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರು ಬೆಂಬಲಿಸುತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಯಾವುದೇ ಪ್ರಕಟಣೆಗೆ ಮಹತ್ವ ನೀಡಬೇಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಸಣ್ಣೀರಪ್ಪ ಮನವಿ ಮಾಡಿಕೊಂಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೆಲವರು ನಾರಾಯಣಗೌಡ ಮತ್ತು ಕರವೇ ನಾಯಕರ ಭಾವಚಿತ್ರಗಳನ್ನು ಬಳಸಿಕೊಂಡು ಪ್ರಚಾರ ನಡೆಸುತ್ತಿದ್ದರು. ವಿಶೇಷವಾಗಿ ಮಹೇಶ್ ಜೋಷಿ ಬೆಂಬಲಿಗರು ಈ ರೀತಿಯ ಪೋಸ್ಟರ್ ಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರವೇ ವತಿಯಿಂದ ಮೇಲಿನಂತೆ ಸ್ಪಷ್ಟೀಕರಣ ನೀಡಲಾಗಿದೆ.



