ಶಿವಮೊಗ್ಗ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಆದರೆ, ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಇವರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ ಎಂದು ಟೀಕಿಸಿದರು.
ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ ಎಂದರು.
ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು ಎಂದರು.
ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್ ಕಾರ್ಡ್ ಹೊಂದಿರುವವರಿಗೂ ನಷ್ಟ ಎಂದರು.




