ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ (ಸಂಖ್ಯೆ 4) ವಿಧೇಯಕ, 2025 ನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧೇಯಕವನ್ನು ಪರ್ಯಾಲೋಚಿಸಿ, ಅಂಗಿಕರಿಸುವಂತೆ ಕೋರಿದರು. ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.




