ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ತಕ್ಷಣವೇ ಒಳ ಮೀಸಲಾತಿ ಪ್ರಕಟಿಸಬೇಕು ಎಂದು ಪಟ್ಟು ಹಿಡಿದಿರುವ ಸಮುದಾಯದ ಬಿಜೆಪಿ ನಾಯಕರು ತಪ್ಪಿದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮಂತ್ರಿಗಳಾದ ಎ.ನಾರಾಯಣಸ್ವಾಮಿ ಮತ್ತು ಗೋವಿಂದ ಕಾರಜೋಳ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಆಗಸ್ಟ್ ಒಂದರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಆಗಸ್ಟ್ 1ಕ್ಕೆ ನ್ಯಾಯಮೂರ್ತಿ ಚಂದ್ರಚೂಡ ಅವರು ತೀರ್ಪು ಕೊಟ್ಟು ಒಂದು ವರ್ಷ ಆಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಗಸ್ಟ್ 10ರೊಳಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಆಗಸ್ಟ್ 11ರಿಂದ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿದರು.
ಇಲ್ಲದೇ ಇದ್ದಲ್ಲಿ ರಾಜ್ಯದ ಮಾದಿಗರು ಕರ್ನಾಟಕ ಬಂದ್‍ಗೆ ತೀರ್ಮಾನ ಮಾಡಲಿದ್ದೇವೆ. 4-5 ಸಾವಿರ ಜನರ ಸಭೆ ನಡೆಸಿ ಈ ಕುರಿತು ತೀರ್ಮಾನಿಸಲಿದ್ದೇವೆ ಎಂದರು.
ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ರಾಜ್ಯದಲ್ಲಿ ಅಸಹಕಾರ ಚಳವಳಿ ಸಂಘಟಿಸುತ್ತೇವೆ. ರಾಜ್ಯ ಸರಕಾರ ನಡೆಸಲು ಬಿಡುವುದಿಲ್ಲ ಎಂದರು.
ಒಳ ಮೀಸಲಾತಿ ಜಾರಿ ಮಾಡದೆ ಇರುವುದರಿಂದ ಕಾಂಗ್ರೆಸ್ ಸೋತಿದ್ದಾಗಿ ಮುಖ್ಯಮಂತ್ರಿಗಳು ಹಿಂದೆ ಹೇಳಿದ್ದರು. ಅದು ಮತ್ತೊಮ್ಮೆ ಮರುಕಳಿಸುವ ನಿಟ್ಟಿನಲ್ಲಿ ಮಾದಿಗ ಸಮುದಾಯ ಹೆಜ್ಜೆ ಇಡಲಿದೆ ಎಂದರು.
ಒಳ ಮೀಸಲಾತಿಗಾಗಿ ಮಾದಿಗ ಸಮಿತಿಯು ಮೂರೂವರೆ ದಶಕಗಳಿಂದ ಹೋರಾಟ ಮಾಡುತ್ತಿದೆ. ತೆಲಂಗಾಣದಲ್ಲಿ ಮಾದಿಗರ ಮೀಸಲಾತಿಗೆ ಆದ ಅನ್ಯಾಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅಲ್ಲಿ ಮೀಸಲಾತಿ ನೀಡಿ 1999ರಲ್ಲಿ ಒಳ ಮೀಸಲಾತಿ ಜಾರಿ ಮಾಡಿದ್ದರು. ನಂತರ 2004ರಲ್ಲಿ ಅಲ್ಲಿನ ಹೈಕೋರ್ಟ್ ಒಳ ಮೀಸಲಾತಿ ಅವಶ್ಯಕತೆ ಇದೆ ಎಂದಿತ್ತು ಎಂದರು.
ಕಾಂಗ್ರೆಸ್ ಒಳ ಮೀಸಲಾತಿ ಅವಶ್ಯಕತೆ ಇಲ್ಲವೆಂದು ಅವಕಾಶ ನಿರಾಕರಿಸಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೂ ಶೋಷಿತರಲ್ಲಿ ಶೋಷಿತರು, ವಂಚಿತರಲ್ಲಿ ವಂಚಿತರು, ಅಸ್ಪøಶ್ಯರಲ್ಲಿ ಅಸ್ಪೃಶ್ಯರಿಗೆ ಮೀಸಲಾತಿ ನೀಡಿಲ್ಲ. ಬದ್ಧತೆ ಪ್ರದರ್ಶಿಸಲಿಲ್ಲ ಎಂದರು.
ರಾಜ್ಯದಲ್ಲಿ ಅನೇಕ ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಹಾಗೂ ಇತರ ಪಕ್ಷಗಳು ಮಾದಿಗರನ್ನು ಮರೆತಿದ್ದವು. ಒಳ ಮೀಸಲಾತಿ ಬಗ್ಗೆ ಆತುರ ಪಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರಿಗೆ ಸೂಚಿಸಿದ್ದರು. ಆದರೂ ರೇವಂತ್ ರೆಡ್ಡಿ ಅವರು ಒಳ ಮೀಸಲಾತಿ ಜಾರಿಗೊಳಿಸಿದ್ದಾರೆ ಎಂದರು.
ಆಂಧ್ರದಲ್ಲಿ ಚಂದ್ರಬಾಬು ನಾಯ್ಡು, ಪಂಜಾಬ್‍ನಲ್ಲೂ ಇದು ಜಾರಿಯಾಗಿದೆ. ಆದರೆ, ಕರ್ನಾಟಕ ಸರಕಾರ ಮೀನಮೇಷ ಮಾಡುತ್ತಿದೆ ಎಂದರು.
ಬೆಳಗಾವಿಯಲ್ಲಿ 5 ತಿಂಗಳ ಹಿಂದೆ ಮಾದಿಗರು ಹೋರಾಟ ಮಾಡಿದಾಗ ಕೇವಲ 3 ತಿಂಗಳಲ್ಲಿ ಒಳ ಮೀಸಲಾತಿ ಜಾರಿ ಕುರಿತು ಸಚಿವರು ಆಶ್ವಾಸನೆ ಕೊಟ್ಟಿದ್ದಾರೆ. ಬಳಿಕ ನಾಗಮೋಹನ್‍ದಾಸ್ ಆಯೋಗ ರಚಿಸಿ 40 ದಿನಗಳ ಗಡುವು ಕೊಟ್ಟಿದ್ದರು. ಮತ್ತೆ ಅವರು ಸಮಯ ಕೇಳಿದರು. ನಾಗಮೋಹನ್‍ದಾಸ್ ಅವರಿಗೆ ಈ ಸರಕಾರ ಸಹಕಾರ ಕೊಟ್ಟಿಲ್ಲ ಎಂಬುದಕ್ಕೆ ಅನೇಕ ದಾಖಲೆಗಳಿವೆ ಎಂದರು.
ರಾಜಕೀಯ, ಔದ್ಯೋಗಿಕ ಕ್ಷೇತ್ರದಲ್ಲಿ ಅವಕಾಶ ಕುರಿತಂತೆ ಮಾಹಿತಿಯನ್ನೇ ಕೊಡಲಿಲ್ಲ. ನಾಗಮೋಹನ್‍ದಾಸ್ ಅವರಿಗೆ ಸ್ಪಷ್ಟತೆ ಇಲ್ಲ. ಆರೇಳು ತಿಂಗಳು ಕಳೆದರೂ ಒಳ ಮೀಸಲಾತಿ ಜಾರಿ ಆಗುತ್ತಿಲ್ಲ ಎಂದರು.
ಈ ಕುರಿತಂತೆ ಮುಖ್ಯಮಂತ್ರಿಗಳ ನಡವಳಿಕೆ, ಆಡಳಿತದ ಬಗ್ಗೆ ಸಂಶಯವಿದೆ. ಪ್ರತಿ ಸಾರಿ ಹಿಂದುಳಿದ ವರ್ಗದ ನಾಯಕ, ಹಿಂದುಳಿದ ವರ್ಗದ ರಕ್ಷಕ ಎನ್ನುತ್ತಾರೆ. ಕಾಂತರಾಜು ವರದಿ ಜಾರಿ ಬಗ್ಗೆ ಹೇಳುತ್ತಿದ್ದರು. ನಾವು ಮುಖ್ಯಮಂತ್ರಿಗಳನ್ನು ನಂಬಿದ್ದೆವು. ಅವರು ಹೈಕಮಾಂಡ್ ಸೂಚನೆಗೆ ತಲೆ ತಗ್ಗಿಸಿದರು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆದು 4 ವರ್ಷ 10 ತಿಂಗಳಾಗಿದೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ನಿಮ್ಮಿಂದ ಆಗಿಲ್ಲ ಎಂದರು.
ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಸರಕಾರವು ಆ. 16ರಿಂದ ಒಳ ಮೀಸಲಾತಿ ಜಾರಿ ಮಾಡಲು ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು. ಅಸಹಕಾರ ಚಳವಳಿಗೆ ಅವಕಾಶ ಮಾಡಿ ಕೊಡಬಾರದು ಎಂದರು.
ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ. ದಲಿತರಿಗೆ ಮೋಸ ಮಾಡಿಲ್ಲ ಎಂದು ಹೇಳುತ್ತಾರೆ. 2023ರ ಚುನಾವಣೆಯಲ್ಲಿ ಕರ್ನಾಟಕ ವಿಧಾನಸಭೆ ಪ್ರಚಾರದ ವೇಳೆ ಪ್ರಣಾಳಿಕೆಯಲ್ಲಿ ಇದನ್ನು ತಿಳಿಸಿದ್ದರು. ಮೊದಲನೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಟ್ಟು ಜಾರಿ ಮಾಡುವುದಾಗಿ ಹೇಳಿದ್ದರು. ಕುಂಟು ನೆಪ ಹೇಳಿ ನಾಗಮೋಹನದಾಸ್ ಸಮಿತಿ ರಚಿಸಿದರು. 40 ದಿನಗಳಲ್ಲಿ ವರದಿ ತರಿಸುವುದಾಗಿ ಹೇಳಿದ್ದರು. 6 ತಿಂಗಳಾಗಿದೆ. ಇದು ಸರಕಾರ ಮಾಡುತ್ತಿರುವ ದ್ರೋಹ, ಮೋಸ ಎಂದರು.




