ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣ ಇತ್ಯರ್ಥಗೊಂಡಿದ್ದು ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ ಹೀಗಿರುವಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕದ ಬಸ್ ಸಂಚಾರ ಸುಗಮವಾಗಿದ್ದು ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಈ ಹಂತದಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಜೊತೆ ಮಾತನಾಡುವುದಾಗಿ ಹೇಳಿದರು.
ಕರ್ನಾಟಕದ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಹಲ್ಲೆಯಾದ ಘಟನೆ ನಡೆದು 8 ದಿನ ಆಗಿದೆ. ಆರಂಭದಲ್ಲಿ ಒಂದೆರೆಡು ದಿನ ಪ್ರತಿಭಟನೆಗಳಾಗಿದ್ದವು. ಯಾವುದೇ ಹಾನಿಯಾಗಿಲ್ಲ. ಮಹಾರಾಷ್ಟ್ರದಲ್ಲೂ ನಮ್ಮ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಮಸಿ ಬಳಿದಿದ್ದರು. ಅದಕ್ಕೂ ಪ್ರತಿಭಟನೆಗಳು ನಡೆದಿವೆ ಎಂದರು.
ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟಗಳಿಗೆ ನಮ್ಮ ಬೆಂಬಲವಿದೆ. ಆದರೆ ಈ ಸಂದರ್ಭದಲ್ಲಿ ಬಂದ್ ಅಗತ್ಯವಿಲ್ಲ ಎಂದರು.




