ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಪುಂಡಾಟಿಕೆ ತೋರಿಸುತ್ತಿರುವ ಎಂಇಎಸ್ ನಿಷೇಧಿಸಬೇಕು ಹಾಗೂ ಕಳಸ ಬಂಡೂರಿ ಮತ್ತು ಮೇಕೆದಾಟು ಯೋಜನೆ, ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಆಚರಿಸಲು ಕರೆ ನೀಡಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ ರಸ್ತೆ ಸಾರಿಗೆ ಸಂಸ್ಥೆ ಕಂಡಕ್ಟರ್ ಮೇಲೆ ಮಹಾರಾಷ್ಟ್ರದಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಹಲ್ಲೆ ಪ್ರತಿಭಟಿಸಿ ಮಾಜಿ ಶಾಸಕ ಹಾಗೂ ಕನ್ನಡ ಚಳುವಳಿ ನಾಯಕ ವಾಟಾಳ್ ನಾಗರಾಜ್ ಮಾರ್ಚ್ 22 ರಂದು ಕರ್ನಾಟಕ ಬಂದ್ ಕರೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ ಈಗಾಗಲೇ ಎಲ್ಲಾ ಬಿಕ್ಕಟ್ಟು ಇತ್ಯರ್ಥಗೊಂಡಿದೆ ಉಭಯ ರಾಜ್ಯಗಳ ನಡುವೆ ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು ಸೌಹಾರ್ದಯುತ ವಾತಾವರಣ ನೆಲೆಸಿದೆ ಹೀಗಾಗಿ ಬಂದ್ ಕೈ ಬಿಡಬೇಕು ಎಂದು ಮನವಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಅವರು ವಿವಿಧ ಕನ್ನಡ ಪರ ಸಂಘಟನೆಗಳು ಹೋರಾಟಗಾರರು ಮತ್ತು ರೈತ ಹಾಗೂ ದಲಿತ ಸಂಘಟನೆಗಳ ನಾಯಕರ ಜೊತೆ ಬಂದ್ ಕುರಿತಂತೆ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಬಹುತೇಕರು ಈಗಾಗಲೇ ಬಂದ್ ಕರೆ ನೀಡಲಾಗಿದೆ ಅದನ್ನು ವಾಪಸ್ ಪಡೆಯುವುದು ಬೇಡ. ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ಯೋಜನೆ ಕಾಮಗಾರಿಗೆ ಶೀಘ್ರ ಚಾಲನೆ, ಮೇಕೆದಾಟು ಯೋಜನೆಗೆ ಅನುಮೋದನೆ ಸೇರಿದಂತೆ ರಾಜ್ಯದ ಹಲವು ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಬಂದ್ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ, ಬಂದ್ ಮಾಡಿಯೇ ಮಾಡುತ್ತೇವೆ ಎಂದರು.
ಹೊರರಾಜ್ಯ, ಸಂಸತ್ ಗಮನ ಸೆಳೆಯಲು ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮರಾಠಿ ಪುಂಡರು ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಕರ ಮುಖಕ್ಕೆ ಮಸಿ ಬಳಿಯುವುದಲ್ಲದೆ ಹಲ್ಲೆ ಕೂಡ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದರು.
ಅನೇಕ ಕನ್ನಡಪರ ಸಂಘಟನೆಗಳು ನಮಗೆ ಬೆಂಬಲ ಕೊಟ್ಟಿವೆ. ನಾವು ಮಾರ್ಚ್ 22ರಂದು ಬಂದ್ ಮಾಡುತ್ತೇವೆ. ಇನ್ನೂ 3 ದಿನಗಳ ಕಾಲಾವಕಾಶವಿದೆ. ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ. ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಬಂದ್ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದರು.




