ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ನಿಗಮದ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
- 28 ಎಸೆತಗಳಲ್ಲಿ ಸೆಂಚುರಿ, 52 ಎಸೆತಗಳಲ್ಲಿ ಡಬಲ್ ಸೆಂಚುರಿ ಸಿಡಿಸಿದ ವೈಭವ್ ಸೂರ್ಯವಂಶಿ
- 10 ಲಕ್ಷ ರೂ. ಸಾಲವಿರುವ ಪೌರಕಾರ್ಮಿಕ ಮಹಿಳೆಯಿಂದ ಆಶಾ ಕಾರ್ಯಕರ್ತೆಯರಿಗೆ ನೆರವು
- ಕಾಲದ ತುರ್ತು: ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಫ್ಯಾಸಿಸಂ ವಿರುದ್ಧದ ಹೋರಾಟ
- ಪಿತೂರಿ ಬರಹಗಳೆ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆಗೆ ಕಾರಣ
- ಹೊಸ ಸಫಾರಿ, ಟ್ರೆಕ್ಕಿಂಗ್ ಸೇರಿದಂತೆ ಪ್ರಕೃತಿ ಆಧಾರಿತ ಪ್ರವಾಸಿ ಚಟುವಟಿಕೆಗಳ ಆರಂಭ: ಕೆ.ಜೆ.ಜಾರ್ಜ್
ವಿಶ್ವೇಶ್ವರಯ್ಯ ಟವರ್ ಬಳಿಯಿರುವ ನಿಗಮದ ಕಚೇರಿ ಮೇಲೆ ದಾಳಿ ಮಾಡಿರುವ ಸಿಐಡಿ ಅಧಿಕಾರಿಗಳ ತಂಡ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಶೋಧ ಕಾರ್ಯ ನಡೆಸಿ ಕಂಪ್ಯೂಟರ್, ಕೆಲವು ಕಡತಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿದೆ. ಅಲ್ಲದೇ, ಅಧಿಕಾರಿಗಳು ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿಚಾರಣೆ ನಡೆಸಿ, ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದೆ.
ಭೋವಿ ಅಭಿವೃದ್ದಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿತ್ತು.
ಅಕ್ರಮ ಸಂಬಂಧ ಬೆಂಗಳೂರು, ಕಲಬುರಗಿಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಕೋಟ್ಯಂತರ ರೂ. ಅಕ್ರಮವಾಗಿದ್ದರಿಂದ ಕೆಲ ದಿನಗಳ ಹಿಂದಷ್ಟೇ ಸರ್ಕಾರ, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಾಥಮಿಕ ತನಿಖೆಯಲ್ಲಿ 60 ಕೋಟಿಗೂ ಹೆಚ್ಚು ಅಕ್ರಮ ನಡೆದಿರುವ ಮಾಹಿತಿ ದೊರೆತಿದ್ದು ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ನಿಗಮದ ಕಚೇರಿಯಲ್ಲಿ 2021ರ ಏಪ್ರಿಲ್ 5ರಿಂದ 2022ರ ಜುಲೈ 8ರ ವರೆಗೆ ಕಚೇರಿ ಅಧೀಕ್ಷಕರಾಗಿದ್ದ ಪಿ.ಡಿ. ಸುಬ್ಬಪ್ಪ ಅವರನ್ನು ಬಂಧಿಸಿ, ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಕ್ರಮ ಮರೆಮಾಚಲು ನಿಗಮದಲ್ಲಿದ್ದ ಲೆಕ್ಕಪತ್ರಗಳು, ನಗದು ನೋಂದಣಿ ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿರುವ ಆರೋಪ ಸುಬ್ಬಪ್ಪ ಮೇಲಿದೆ.
ಅಲ್ಲದೇ ಪ್ರಧಾನ ವ್ಯವಸ್ಥಾಪಕರಾಗಿದ್ದ ಡಾ.ಬಿ.ಕೆ.ನಾಗರಾಜಪ್ಪ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.




