ಹಿಂಗಾರು ಹಂಗಾಮಿನ ವಿಮಾ ಬೆಳೆಗಳ ಕಟಾವು ಪ್ರಯೋಗಗಳ ಯೋಜನಾ ಪಟ್ಟಿ ಬಿಡುಗಡೆ
ಧಾರವಾಡ: 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ ಮಟ್ಟಕ್ಕೆ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತವಾಗಿರುವ ಬೆಳೆಗಳ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಿಸಿಇ ಸಂರಕ್ಷಣೆ ವೆಬ್ ಪೋರ್ಟಲ್ದಲ್ಲಿ ತಯಾರಿಸಿದ ಬೆಳೆ ಕಟಾವು ಪ್ರಯೋಗಗಳ ಕಾರ್ಯ ಯೋಜನಾ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಮೆಗೆ ಒಳಪಟ್ಟ ಬೆಳೆಗಳ ಕಟಾವು ಪ್ರಯೋಗ ಕಾರ್ಯನಿರ್ವಹಿಸಲು ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ ರಾಜ್ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮತ್ತು ಈ ಕಾರ್ಯದ ಮೇಲ್ವಿಚಾರಣೆಗಾಗಿ ಸಾಂಖ್ಯಿಕ, ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳನ್ನು ನೇಮಿಸಿದ್ದು, ಅವರು ಸಿಸಿಇ ನಿಯಮಾವಳಿಗಳ ಅನುಸಾರವಾಗಿ ನಿಗದಿತ ಕಾಲಾವಧಿಯಲ್ಲಿ ವಿಮೆ ಬೆಳೆಗಳ (ಬೆಳೆ ಅಂದಾಜು ಸಮೀಕ್ಷೆ-ಸಿಸಿಇ) ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಲು ಅವರು ಸೂಚಿಸಿದ್ದಾರೆ.




