ಬೆಂಗಳೂರು: ವಿದ್ಯುತ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಮುಂದಾಗಿರುವ ಇಂಧನ ಇಲಾಖೆ, ಕೆಇಆರ್‌ಸಿ, ಬೆಸ್ಕಾಂಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿದ್ಯುತ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆ ಸಂಬಂಧ ಬೆಂಗಳೂರು ವಿದ್ಯುಚ್ಛಕ್ತಿ ಪೂರೈಕೆ ಕಂಪೆನಿ ಹೊರಡಿಸಿರುವ ಮಾರ್ಗಸೂಚಿ ವಜಾ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.
ಅರ್ಜಿದಾರ ಕರ್ನಾಟಕ ವಿದ್ಯುತ್ ಸೇನೆ ಪರವಾಗಿ ಹಿರಿಯ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ವಾದ ಮಂಡಿಸಿದರು. ಟೆಂಡರ್ ಪಡೆದಿರುವ ವ್ಯಕ್ತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಉದ್ಯಮದಲ್ಲಿರುವ ಎಲ್ಲರನ್ನೂ ಟೆಂಡರ್‌ನಲ್ಲಿ ಭಾಗವಹಿಸುವಂತೆ ಸೂಚಿಸಿಲ್ಲ. ಮಾರ್ಗಸೂಚಿಗಳು ವಿರುದ್ಧವಾಗಿವೆ. ಈ ಬಗ್ಗೆ ಟೆಂಡರ್ ಪಡೆದಿರುವ ರಾಜಶ್ರೀ ಎಲೆಕ್ಟ್ರಿಕಲ್ಸ್‌ಗೂ ಈ ಉದ್ಯಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸಿಂಗಲ್ ಫೇಸ್ ಮೀಟರ್‌ಗೆ 5 ಸಾವಿರ ರೂಪಾಯಿ ಮತ್ತು ತ್ರಿಫೇಸ್ ಮೀಟರ್‌ಗೆ 8 ಸಾವಿರ ರೂಪಾಯಿ ಪಾವತಿಸಬೇಕಿದೆ. ಇದು ಜನರಿಗೆ ಹೊರೆಯಾಗಿ ಪರಿಣಮಿಸಿದೆ ಎಂದರು.
ಪ್ರಕರಣದ ಸಂಬಂಧ ಹೈಕೋರ್ಟ್ ಇಂಧನ ಇಲಾಖೆ, ಕೆಇಆರ್‌ಸಿ, ಬೆಸ್ಕಾಂಗೆ ನೋಟಿಸ್ ಜಾರಿ ಮಾಡಿತು. ಇನ್ನು ಈ ಅರ್ಜಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.




