ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬಹುದಿನದ ಕನಸು ಇದೀಗ ಈಡೇರಿದೆ. ಸಂಸ್ಥೆಯ ನೌಕರರು ಮತ್ತು ಅವರ ಅವಲಂಬಿತರಿಗೆ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೆ ಬಂದಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸಂಸ್ಥೆಯ ಎಲ್ಲ ನೌಕರರಿಗೆ ನಗದು ರಹಿತ ಚಿಕಿತ್ಸೆಯ ಆರೋಗ್ಯ ಕಾರ್ಡ್ ಗಳನ್ನು ನೀಡಲಾಗುತ್ತಿದ್ದು, ದೇಶದಲ್ಲಿ ಕರ್ನಾಟಕ ಸರ್ಕಾರ ಸಾರಿಗೆ ಸಂಸ್ಥೆಯ ನೌಕರರಿಗೆ ಇಂತಹ ಯೋಜನೆ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಶ್ರೇಯ ಪಡೆದಿದೆ.
ರಾಜ್ಯದ 250 ಆಸ್ಪತ್ರೆಯಲ್ಲಿ ಸಾರಿಗೆ ನೌಕರರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆಯಬಹುದಾಗಿದೆ. ಆ ಮೂಲಕ ಡ್ರೈವರ್, ಕಂಡಕ್ಟರ್ ಸೇರಿದಂತೆ ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ. ಯಾವುದೇ ಕಾಯಿಲೆಗೆ, ಸಂಪೂರ್ಣ ಚಿಕಿತ್ಸೆ ವೆಚ್ಚ ನೀಡಲಾಗುವುದು. ಸಾರಿಗೆ ನೌಕರರ ಮನೆಯ ಆರು ಜನ ಈ ಕಾರ್ಡ್ ಬಳಸಿ ಚಿಕಿತ್ಸೆ ಪಡೆದುಕೊಳ್ಳಬಹುದು. ಕೆಎಸ್ಆರ್ಟಿಸಿ ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯ ಪಡೆಯಬಹುದು.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್ಆರ್ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಅವರನ್ನು ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು ಎಂದರು.
ಕೆಎಸ್ಆರ್ಟಿಸಿ ಆರೋಗ್ಯ ಯೋಜನೆಯಡಿ ಸಾರಿಗೆ ಸಂಸ್ಥೆಯ ಎಲ್ಲ ನೌಕರರು, ಅವರ ತಂದೆ – ತಾಯಿ ಮತ್ತು ಪತ್ನಿ – ಮಕ್ಕಳಿಗೆ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ ಎಂದರು.
ಇದೊಂದು ಬಹಳ ಒಳ್ಳೆಯ ಕಾರ್ಯಕ್ರಮ. ಕಾರ್ಮಿಕ ನಾಯಕರು, ನೌಕರರು ಬಹಳ ದಿನದಿಂದ ಈ ಬೇಡಿಕೆ ಇಟ್ಟಿದ್ದರು. ನೌಕರರು, ಕುಟುಂಬದವರು ಇದರ ಸೌಲಭ್ಯ ಪಡೆಯಲಿದ್ದಾರೆ. ಈ ಯೋಜನೆಯಿಂದ ಬಹಳಷ್ಟು ಉಪಯೋಗವಾಗಲಿದೆ. ಯಾವ ಯಾವ ಸ್ಥಳದಲ್ಲಿದ್ದಾರೋ ಅಲ್ಲೇ ಆರೋಗ್ಯ ಸೇವೆ ಪಡೆಯಬಹುದು. ಆಸ್ಪತ್ರೆಯ ಪ್ರತಿನಿಧಿಗಳಿಗೆ ನಾನು ಸೂಚನೆ ಕೊಡ್ತೇನೆ. ಯಾವುದೇ ಕಾರಣಕ್ಕೂ ತಿರಸ್ಕಾರ ಮನೋಭಾವದಿಂದ ನೋಡಬಾರದು. ಕೆಎಸ್ಆರ್ಟಿಸಿ ಮಾತ್ರ ಯೋಜನೆಯನ್ನು ಇಂದು ಜಾರಿಗೆ ತಂದಿದೆ. ಉಳಿದ ನಿಗಮಗಳು ಮೂರು ತಿಂಗಳೊಳಗಾಗಿ ಯೋಜನೆ ಜಾರಿ ಮಾಡಲಿವೆ ಎಂದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸುಮಾರು 20 ವರ್ಷಗಳಿಂದ ಈ ವಿಚಾರವಾಗಿ ಬೇಡಿಕೆ ಇತ್ತು. 250 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಇನ್ನೂ 50 ಆಸ್ಪತ್ರೆಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಮುಂದೆ ಸರ್ಕಾರದ ಆಸ್ಪತ್ರೆಗಳನ್ನು ಸಹ ಸೇರಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅನೇಕ ನೌಕರರ ಕನಸು ನನಸಾದ ದಿನ ಇದು ಎಂದು ಸಂತಸ ವ್ಯಕ್ತಪಡಿಸಿದರು.
ಇದೇ ವೇಳೆ, ಕೆಎಸ್ಆರ್ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೀಡಲಾಗುವ 1 ಕೋಟಿ ರೂ. ಹಾಗೂ ಸೇವೆಯಲ್ಲಿರುವ ಮೃತಪಟ್ಟ ನೌಕರರ ಕುಟುಂಬಕ್ಕೆ ನೀಡಲಾಗುವ 10 ಲಕ್ಷ ರೂ ಪರಿಹಾರದ ಚೆಕ್ ಅನ್ನು ಸಿದ್ದರಾಮಯ್ಯ ವಿತರಿಸಿದರು.



