ಬೆಳಗಾವಿ: ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾದಂತೆ ಮತ್ತು ಪರಿಶೀಲನಾ ಸಮಿತಿಯು ಶಿಫಾರಸ್ಸು ಮಾಡಿದಂತೆ ಹಾಗೂ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಭೂಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025ಕ್ಕೆ ಪರಿಷತ್ತಿನಲ್ಲಿ ಡಿ.17ರಂದು ಅಂಗೀಕಾರ ದೊರೆಯಿತು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಕೊಡಗು ಜಿಲ್ಲೆಯ ಭೂ ದಾಖಲೆಗಳನ್ನು ಕಾನೂನಿಗೆ ಅನುಗುಣವಾಗುವಂತೆ ಮಾಡಲು ಮತ್ತು ರಾಜ್ಯದ ಉಳಿದ ಭಾಗದಲ್ಲಿ ಅದರ ಸಂಗತತೆಯನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಿ ಈ ವಿಧೇಯಕ ತರಲಾಗುತ್ತಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿ ವಿಧೇಯಕವನ್ನು ಅಂಗೀಕರಿಸಲು ಕೋರಿದರು.
ಚರ್ಚೆಯ ಬಳಿಕ, ಧ್ವನಿಮತದ ಮೂಲಕ ಪರಿಷತ್ತ್ತಿನಲ್ಲಿ ವಿಧೇಯಕಕ್ಕೆ ಅನುಮೋದನೆ ದೊರೆಯಿತು.




