ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮ ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24 ಹಾಗೂ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರುವು ಗಾಂಧಿನಗರ, ಶಿವಮೊಗ್ಗ ಇಲ್ಲಿ ಪಡೆಯಬಹುದಾಗಿದೆ. ದೂ.ಸಂ. 08182-229634 ಗೆ ಸಂಪರ್ಕಿಸಬಹುದು.




