ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏಪ್ರಿಲ್ 21, 22 ಮತ್ತು 23 ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.



