ಕತ್ತಿಯನ್ನು ಸಂಪುಟದಿಂದ ಕಿತ್ತೊಗೆಯಿರಿ: ಎಚ್.ಡಿ.ಕುಮಾರಸ್ವಾಮಿ

5 years ago

ಬೆಂಗಳೂರು: ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ. ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಡಿತರ ಹಂಚಿಕೆ ಕುರಿತು ವ್ಯಕ್ತಿಯೊಬ್ಬರಿಗೆ ಸಾಯಿರಿ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ( ಕತ್ತಿ ಹೇಳಿಕೆಯನ್ನು) ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.

Leave a Reply