ಬೆಂಗಳೂರು/ಕಾರವಾರ: ಬೆಂಗಳೂರಿನ ಲಲಿತ್ ಅಶೋಕ ಹೋಟೆಲಿನಲ್ಲಿ ನಡೆದ “ಕೌಶಲ್ಯ ಶೃಂಗಸಭೆ” ಕಾರ್ಯಕ್ರಮದಲ್ಲಿ ಸಂಜೀವಿನಿ (ಎನ್ಆರ್ಎಲ್ಎಂ) ಯೋಜನೆಯಡಿ ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತಗೆ ರಾಜ್ಯದ ಪ್ರತಿಷ್ಠಿತ “ಕೌಶಲ್ಯ ಕರ್ನಾಟಕ ಪ್ರಶಸ್ತಿ” ಲಭಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಪ್ರತಿ ವಿಭಾಗವಾರು ತಲಾ ಎರಡರಂತೆ ಒಟ್ಟು ಎಂಟು ಸ್ವಸಹಾಯ ಗುಂಪುಗಳಿಗೆ ಈ ಪ್ರಶಸ್ತಿ ದೊರಕಿದೆ. ಅದರಲ್ಲಿ ಜಿಲ್ಲಾ ಪಂಚಾಯತ ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮದ ಹಿರಿಹೋನ್ನಪ್ಪ ಸ್ವಸಹಾಯ ಗುಂಪು ಸಮಗ್ರ ವಿಷಯಗಳ ಮೌಲ್ಯ ಮಾಪನಗಳಲ್ಲಿ ನೂರಕ್ಕೆ ತೊಂಬ್ಬತ್ತೇಳು ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಈ ಪ್ರಶಸ್ತಿಗೆ ಭಾಜನವಾಗಿದೆ.
ಈ ಪ್ರಶಸ್ತಿ ಜಿಲ್ಲೆಯ ಅಭಿವೃದ್ಧಿ ಮತ್ತು ಮಹಿಳಾ ಶಕ್ತೀಕರಣ ಕ್ಷೇತ್ರದಲ್ಲಿ ಮತ್ತೊಂದು ಹೆಜ್ಜೆ ಗುರುತು ಆಗಿದೆ. ಸಂಜೀವಿನಿ ಯೋಜನೆಯಡಿ ಮಹಿಳಾ ಸಬಲೀಕರಣ, ಸ್ವ-ಸಹಾಯ ಗುಂಪುಗಳ ಬಲವರ್ಧನೆ ಮತ್ತು ಆರ್ಥಿಕ ಸ್ವಾವಲಂಬನೆ ಕ್ಷೇತ್ರಗಳಲ್ಲಿ ಜಿಲ್ಲೆಯ ಸಾಧನೆಗೆ ಈ ಗೌರವ ದೊರಕಿದೆ.
ಉತ್ತರ ಕನ್ನಡ ಜಿಲ್ಲಾ ಪಂಚಾಯತ ಪರವಾಗಿ ಈ ಗೌರವವನ್ನು ಸ್ವೀಕರಿಸುವುದು ನಮ್ಮೆಲ್ಲರಿಗೂ ಹೆಮ್ಮೆಯ ಕ್ಷಣವಾಗಿದೆ. ಸಂಜೀವಿನಿ ಎನ್ಆರ್ಎಲ್ಎಂ ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಸಬಲೀಕರಣ ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಿಲ್ಲೆಯ ಮಟ್ಟದಲ್ಲಿ ಮಾಡಿದ ಸಮೂಹ ಪ್ರಯತ್ನಕ್ಕೆ ರಾಜ್ಯ ನೀಡಿದ ‘ಕೌಶಲ್ಯ ಕರ್ನಾಟಕ ಪ್ರಶಸ್ತಿ’ ಪ್ರೇರಣೆಯಾಗಿದೆ. ಈ ಸಾಧನೆಗೆ ಗ್ರಾಮ ಪಂಚಾಯತಗಳಿಂದ ಹಿಡಿದು ಸ್ವ-ಸಹಾಯ ಗುಂಪಿನ ಸದಸ್ಯೆಯರ ತನಕ ಎಲ್ಲರ ಸಹಕಾರ ಮುಖ್ಯ ಕಾರಣ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗೆ ನಾವು ಬದ್ಧರಾಗಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸದಿ ತಿಳಿಸಿದ್ದಾರೆ.
ಸಂಜೀವಿನಿ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಕಾರ್ಯ ನಡೆಯುತ್ತಿದ್ದರೂ, ಉತ್ತರ ಕನ್ನಡ ಜಿಲ್ಲೆಯ ಸಾಧನೆ ಅತ್ಯಂತ ಮಾದರಿಯಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳ ಸಂಘಟನೆ, ಉದ್ಯಮಾಭಿವೃದ್ಧಿ ಮತ್ತು ಆರ್ಥಿಕ ಸಬಲೀಕರಣದ ಕ್ಷೇತ್ರದಲ್ಲಿ ಜಿಲ್ಲೆಯ ಪ್ರಯತ್ನ ಶ್ಲಾಘನೀಯ. ಹಾಗೂ ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಿಗೂ ಉತ್ತರ ಕನ್ನಡ ಮಾದರಿ ಪ್ರೇರಣೆಯಾಗಿ ನಿಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ತಿಳಿಸಿದ್ದಾರೆ.




