ಬೆಂಗಳೂರು:‘ಕಾವ್ಯಾನಂದ’ಕಾವ್ಯನಾಮದಿಂದ ಪ್ರಸಿದ್ಧರಾದ ಡಾ. ಸಿದ್ಧಯ್ಯ ಪುರಾಣಿಕರ ಹೆಸರಿನಲ್ಲಿ ಸರ್ಕಾರಿ ಕಲಾ ಕಾಲೇಜಿನ ಕರ್ಣಾಟಕ ಸಂಘ ಮತ್ತು ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ ಸಂಯುಕ್ತವಾಗಿ ಪದವಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕವನ ವಾಚನ ಸ್ಪರ್ಧೆಯನ್ನು ಏರ್ಪಡಿಸಿದೆ. ಅಕ್ಟೋಬರ್ 31ರಂದು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯುವ ಈ ಸ್ಪರ್ಧೆಗೆ ಆಸಕ್ತ ಪದವಿ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಭಾಗವಹಿಸಬಹುದಾಗಿದೆ.
ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರವೇಶ ಶುಲ್ಕವಿರುವುದಿಲ್ಲ. ಕವನ ಸ್ವಂತದ್ದಾಗಿರಬೇಕು. ಆಯ್ದ ಕವನಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಪ್ರಥಮ ಬಹುಮಾನ ರೂ.5000, ದ್ವಿತೀಯ ಬಹುಮಾನ ರೂ.3000, ತೃತೀಯ ಬಹುಮಾನ ರೂ.2000 ಹಾಗೂ ಎರಡು ಸಮಾಧಾನಕರ ಬಹುಮಾನ ತಲಾ ರೂ.1000.
ಆಸಕ್ತರು ಸಂಪರ್ಕಿಸಿ: ಕಾರ್ಯದರ್ಶಿ, ಕರ್ಣಾಟಕ ಸಂಘ, ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 01, ವಾಟ್ಸಾಪ್ ಸಂಖ್ಯೆ – 9060400677




