ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರುವುದರಿಂದ ಅವರ ಎಚ್ಚರಿಕೆ ಅರ್ಥ ಮಾಡಿಕೊಳ್ಳಬೇಕು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ ಟಿ ಬಿ ಜಯಚಂದ್ರ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಯಿ ಮುಚ್ಚಿಕೊಂಡು ಇರಿ ಅಂದರೆ ಸುಮ್ಮನಿರಬೇಕು ಎಂದರ್ಥ. ಖರ್ಗೆ ಅವರ ಈ ಹೇಳಿಕೆಯು ಎಲ್ಲದಕ್ಕೂ ತೆರೆ ಎಳೆದಿದೆ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಬಗ್ಗೆ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಲ್ಲ. ಇತರೆ ರಾಜ್ಯಗಳ ಬಗ್ಗೆ ನೀಡಿದ ಹೇಳಿಕೆಯನ್ನು ಕರ್ನಾಟಕದ ಬಗ್ಗೆ ಎಂದು ಭಾವಿಸಿಕೊಳ್ಳಬಾರದು ಎಂದರು.
ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಹೇಳಿಕೆಗಳ ಬಗ್ಗೆ ನಾನೇನು ಹೇಳಲಾರೆ, ನಾವೆಲ್ಲ ಹಿರಿಯರು, ನಾವು ಅರ್ಥ ಮಾಡಿಕೊಳ್ಳಬೇಕು. ಪದೇ ಪದೇ ಎಲ್ಲದಕ್ಕೂ ಉತ್ತರ ಕೊಡೋಕೆ ಆಗಲ್ಲ ಎಂದರು.
ರಾಜಕಾರಣ ಒಂದೊಂದು ಸಂದರ್ಭದಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಆದರೆ ಬಿಜೆಪಿಯವರು ನಮ್ಮ ಸಿಎಂ ಮೇಲೆ ಆರೋಪ ಮಾಡಿದ್ದಾರೆ. ಮುಡಾ ಪ್ರಕರಣದಲ್ಲಿ ಅಪಪ್ರಚಾರ ಮಾಡಿ, ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ ಇಂದು ಸಿಎಂ ನಿರ್ದೋಷಿ ಎಂದು ತೀರ್ಪು ಬಂದಿದೆ ಎಂದರು.
ರಾಜ್ಯ ಸರ್ಕಾರ ಸ್ಥಳೀಯ ಆಡಳಿತದ ಮೇಲೆ ಹೆಚ್ಚು ಗಮನ ಹರಿಸಬೇಕು. ಅದೇ ರೀತಿ ಪಕ್ಷ ಸ್ಥಳೀಯ ಚುನಾವಣೆ ಮೇಲೆ ಗಮನ ಹರಿಸಬೇಕು. ಆದರೆ ಈ ವೇಳೆ ಹೈಕಮಾಂಡ್‌ನವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ಈಗ ಯಾವುದೇ ಬದಲಾವಣೆ ಆಗಲ್ಲ ಎಂದು ಅನ್ನಿಸುತ್ತಿದೆ ಎಂದರು.




