ಯುವತಿಯರನ್ನು ಚುಡಾಯಿಸಿದ್ದಕ್ಕೆ ಎರಡು ಕೋಮುಗಳ ಯುವಕರ ನಡುವೆ ಘರ್ಷಣೆ

4 years ago

ಬಾಗಲಕೋಟೆ: ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಕೆರೂರು ಪಟ್ಟಣದಲ್ಲಿ 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರು ಇದುವರೆಗೆ ಸುಮಾರು 18 ಜನರನ್ನ ವಶಕ್ಕೆ ಪಡೆದಿದ್ದಾರೆ. ನಾಪತ್ತೆಯಾದ 15ಕ್ಕೂ ಹೆಚ್ಚು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಎಸ್​ಪಿ ಜಯಪ್ರಕಾಶ್ ಕೆರೂರು ಪಟ್ಟಣದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್​ಪಿ, ಹಳೇ ದ್ವೇಷ ಹಾಗೂ ಯುವತಿಯರನ್ನು ಚೂಡಾಯಿಸಿದ್ದೇ ಇದಕ್ಕೆ ಕಾರಣ. ಸಾಮಾಜಿಕ ಜಾಲತಾಣದಲ್ಲಿ ಯಾರೂ ಕೂಡ ತಪ್ಪು ಸಂದೇಶ ರವಾನೆ ಮಾಡಬಾರದು ಎಂದಿದ್ದಾರೆ.

ಕೆರೂರು ಗಲಾಟೆಗೆ ಸಂಬಂಧಿಸಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಗುಂಪಿನ 18 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ ಬಾಗಲಕೋಟೆ ಎಸ್​ಪಿ ಜಯಪ್ರಕಾಶ್, ನಿನ್ನೆ ಎರಡು ಕೋಮಿನ ಯುವಕರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಒಂದು ಗುಂಪಿನ 3 ಜನ, ಮತ್ತೊಂದು ಗುಂಪಿನ ಓವ೯ ಸೇರಿ ಒಟ್ಟು ನಾಲ್ವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಘಟನೆಯಲ್ಲಿ ಒಂದು ಬೈಕ್ ಮತ್ತು ತಳ್ಳುವ ಗಾಡಿ ಸುಟ್ಟಿದ್ದಾರೆ. 6 ಬೈಕ್​ಗಳು ಜಖಂ ಆಗಿವೆ. ಭದ್ರತೆಗಾಗಿ 5 ಐಆರ್​ಬಿ ತುಕುಡಿಗಳು ಸೇರಿದಂತೆ ಹೆಚ್ಚಿನ ಆಫೀಸರ್​ಗಳನ್ನು ನಿಯೋಜಿಸಲಾಗಿದೆ ಎಂದು ಎಸ್​ಪಿ ಜಯಪ್ರಕಾಶ್ ಹೇಳಿದರು.

Leave a Reply