ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ತಲೆಹರಟೆ ರೀಲ್ಸ್ ಗಳಿಂದ ಜನಪ್ರಿಯಳಾಗಿರುವ ಕಿಪ್ಪಿ ಕೀರ್ತಿ ತನ್ನ ಪ್ರಿಯತಮನ ವಿರುದ್ಧ ದೂರು ದಾಖಲಿಸಿದ್ದಾಳೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ತನ್ನ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಿಯತಮ ಮುತ್ತು ಹಾಗೂ ಆತನ ಸ್ನೇಹಿತ ದಚ್ಚು ವಿರುದ್ಧ ಕಿಪ್ಪಿ ಕೀರ್ತಿ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ.
ದೂರಿನ ಆಧಾರದ ಮೇಲೆ Bachpan ವಿಚಾರಣೆ ನಡೆಸಿದಾಗ ಕಿಪ್ಪಿ ಕೀರ್ತಿ ಅವರಿಬ್ಬರ ಲಿಂಗದ ಬಗ್ಗೆ ಮಾತನಾಡಿದ್ದಳಂತೆ. ನೀವಿಬ್ಬರು ಗೇ ಎಂದು ಹೇಳಿದ್ದಳಂತೆ. ಹೀಗಾಗಿ ಇಬ್ಬರು ಆಕೆಯ ಫೋಟೋ, ವಿಡಿಯೋಗಳನ್ನು ಇಟ್ಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕಿಪ್ಪಿ ಕೀರ್ತಿ ಹಾಗೂ ಸ್ನೇಹಿತರನ್ನು ಠಾಣೆಗೆ ಕರೆಸಿದ ಪೊಲೀಸರು ಮತ್ತೆ ಈ ರೀತಿ ಮಾಡಬೇಡಿ ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.




