ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಏಳು ಸ್ಥಾನ ಗಳಿಸುತ್ತಿದ್ದು, ಇದರಲ್ಲಿ ಅವಕಾಶ ವಂಚಿತರು ಪಕ್ಷದ ನಿಷ್ಠಾವಂತರಿಗೆ ಆದ್ಯತೆ ನೀಡಬೇಕು ಹಾಗೂ ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಧೀರ್ಘ ಸಮಾಲೋಚನೆ ನಡೆಸಿದರು. ಈ ವೇಳೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸಲಹೆ ಮಾಡಿದ್ದಾರೆ.
ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಎರಡು ಸ್ಥಾನ ನೀಡಬೇಕು. ಅದರಲ್ಲಿ ಒಂದು ಸ್ಥಾನ ವಾಲ್ಮೀಕಿ ಸಮುದಾಯ ಮತ್ತೊಂದು ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂದು ಶಿವಕುಮಾರ್ ಅವರಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.
ಈ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಇಂದಿನ ಸಭೆಯಲ್ಲಿ ಜಾತಿವಾರು ಹಾಗೂ ಪ್ರಾಂತ್ಯವಾರು ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗಿವೆ. ನಾವು ನಮ್ಮ ಸಲಹೆಗಳನ್ನು ನೀಡಿದ್ದೇವೆ ಎಂದರು.
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಂಗಳೂರು ಕರಾವಳಿ ಕರ್ನಾಟಕ ಸೇರಿದಂತೆ ಎಲ್ಲಾ ಪ್ರಾಂತ್ಯವಾರು ಆಯ್ಕೆಗಳಾಗಬೇಕು. ಬೆಂಗಳೂರಿನವರನ್ನು ಮಾತ್ರ ಪರಿಗಣಿಸುವುದು ಸರಿಯಲ್ಲ. ಅದೇ ರೀತಿ ಜಾತಿ ಸಮುದಾಯವಾರು ಹಂಚಿಕೆ ಮಾಡಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಲಂಬಾಣಿ ಸಮುದಾಯದ ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಜಾತಿ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಿಎಂ, ಡಿಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಸಲಹೆ ನೀಡಿದ್ದೇನೆ ಎಂದರು.
ಕೆಲ ಸದಸ್ಯರ ಪುನರ್ ಆಯ್ಕೆ ಅನಿವಾರ್ಯ. ಹಾಗೆಯೇ ಹೊಸಬರನ್ನು ಗುರುತಿಸದೇ ಇದ್ದರೆ ಪಕ್ಷ ಸಂಘಟನೆ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ ಕನಿಷ್ಠ ನಾಲ್ಕೈದು ಜನರಿಗಾದರೂ ಹೊಸಬರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.




